ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಸ್ಫೋಟ (ಸಾಂದರ್ಭಿಕ ಚಿತ್ರ) 
ದೇಶ

ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: 45 ಸಾವು

ಪೂರ್ವ ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಕನಿಷ್ಟ 45 ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಬುಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಕನಿಷ್ಟ 45 ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂರ್ವ ಆಫ್ಘಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ ಘಟನೆ ನಡೆದಿದ್ದು, ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಸ್ಫೋಟದಿಂದಾಗಿ ಕನಿಷ್ಟ 45 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ದೌಡಾಯಿಸಿದ್ದಾರೆ.

ವಾಲಿಬಾಲ್ ಪಂದ್ಯ ನಡೆಯುತ್ತಿದ್ದರಿಂದ ಪಂದ್ಯವನ್ನು ವೀಕ್ಷಿಸಲು ಸಾಕಷ್ಟು ಮಂದಿ ಆಗಮಿಸಿದ್ದರು. ಇದೇ ಅವಕಾಶವನ್ನು ಬಳಸಿಕೊಂಡ ಉಗ್ರರು ತಮ್ಮ ದುಷ್ಕೃತ್ಯವನ್ನು ನಡೆಸಿದ್ದಾರೆ. ಸ್ಫೋಟದ ಹಿಂದೆ ತಾಲಿಬಾನ್ ಉಗ್ರರ ಕೈವಾಡವಿರುವ ಶಂಕೆ ಇದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿ ಉಗ್ರರನ್ನು ಮಟ್ಟಹಾಕಲು ವಿಶ್ವ ಸಮುದಾಯ ಕೈಗೊಂಡಿದ್ದ ಸೇನಾ ಕಾರ್ಯಾಚರಣೆಯನ್ನು ವಿರೋಧಿಸಿದ್ದ ತಾಲಿಬಾನ್ ಉಗ್ರಸಂಘಟನೆ ಈ ವಷ್ಯಾಂತ್ಯದೊಳಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕು ಎಂದು ಎಚ್ಚರಿಕೆ ನೀಡಿತ್ತು.

ಆದರೆ ಆಫ್ಘನ್ ಸರ್ಕಾರ ಕಾರ್ಯಾಚರಣೆಯನ್ನು  ಮುಂದುವರೆಸಿತ್ತು. ಇದೇ ಕಾರಣದಿಂದಾಗಿ ತಾಲಿಬಾನ್ ಉಗ್ರ ಸಂಘಟನೆ ಈ ಆತ್ಮಾಹುತಿ ದಾಳಿ ನಡೆಸಿರ ಬಹುದು ಎಂದು ಶಂಕಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT