ವಿಜಯಾಪುರ: ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಕಿಸ್ ಆಫ್ ಲವ್ ಕಾನೂನು ಚೌಕಟ್ಟಿನಲ್ಲಿ ನಡೆದರೆ ಕಿಸ್ಸಿಂಗ್ ಡೇಗೆ ಅನುಮತಿ ನೀಡುವುದಾಗಿ ಹೇಳಿದ್ದಾರೆ.
ಕಾನೂನು ಚೌಕಟ್ಟಿನಲ್ಲಿ ಯಾವ ರೀತಿ ಕಿಸ್ ಆಫ್ ಲವ್ ಆಚರಿಸಬೇಕು ಎಂಬುವುದನ್ನು ಗೃಹ ಸಚಿವರೇ ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಜಾರ್ಜ್ ಅವರು ಕಾನೂನು ಚೌಕಟ್ಟಿನಲ್ಲಿ ಯಾವ ರೀತಿ ಕಿಸ್ ನೀಡಬೇಕು. ಎಲ್ಲಿ ಕಿಸ್ ಮಾಡಬೇಕು ಎಂಬುವುದನ್ನು ಸ್ಪಷ್ಟ ಪಡಿಸಿದರೆ ಯುವಕರು, ವೃದ್ಧರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಗಿ ನುಡಿದರು.