ಸಿದ್ದರಾಮಯ್ಯ 
ದೇಶ

ನಿಗಮಾಧೀಶರ ವಿವಾದ ಪ್ರತಿಕ್ರಿಯೆಗೆ ಸಿಎಂ ನಕಾರ

ನಿಗಮ-ಮಂಡಳಿ ನೇಮಕ ಹಿನ್ನೆಲೆಯಲ್ಲಿ...

ಬೆಂಗಳೂರು: ನಿಗಮ-ಮಂಡಳಿ ನೇಮಕ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ವಿಧಾನಸೌಧದ ಎದುರು ಆರೋಗ್ಯ ಕವಚ ಯೋಜನೆಗಾಗಿ 198 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸಿದ ನಂತರ ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ, ಅವರು ಉತ್ತರಿಸಲು ನಿರಾಕರಿಸಿದ್ದಾರೆ. ಈ ಸಂಬಂಧ ಸಚಿವ ಅಂಬರೀಶ್ ಅವರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆಯೂ ಉತ್ತರಿಸಲು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆಯೂ ಉತ್ತರಿಸಲು ನಿರಾಕರಿಸಿದ ಅವರು, ಇಡಿ ಬೆಳವಣಿಗೆ ಬಗ್ಗೆ ಮೌನವಹಿಸಿದ್ದಾರೆ.

ಭಾವಚಿತ್ರ; ಕುತೂಹಲಕಾರಿ ಸಂಗತಿ ಎಂದರೆ 108 ಆಂಬ್ಯುಲೆನ್ಸ್‌ನಲ್ಲಿ ಈ ಬಾರಿ ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಭಾವಚಿತ್ರ ರಾರಾಜಿಸುತ್ತಿದೆ.

ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ಭಾವಚಿತ್ರವನ್ನು 108 ಆಂಬುಲೆನ್ಸ್‌ನಲ್ಲಿ ಅಳವಡಿಸಲಾಗಿತ್ತು. ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಜ್ಯ ಸರ್ಕಾರ ಪ್ರಚಾರ ಪಡೆಯುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಮುಖಂಡರು ರಾಜ್ಯ.ದ ಎಲ್ಲ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಮಾತ್ರವಲ್ಲ ಭಾವಚಿತ್ರಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಈಗ ರಾಜ್ಯ ಮತ್ತು ಕೇಂದ್ರದಲ್ಲಿ ಸರ್ಕಾರ ಬದಲಾಗಿದೆ. ಜತೆಗೆ 108 ಆಂಬ್ಯುಲೆನ್ಸ್‌ನಲ್ಲಿ ಭಾವಚಿತ್ರವೂ ಬದಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel