ನರೇಂದ್ರ ಮೋದಿ - ನವಾಜ್ ಷರೀಫ್ 
ದೇಶ

ಭಾರತ-ಪಾಕ್ ನಡುವೆ ದ್ವಿಪಕ್ಷೀಯ ಮಾತುಕತೆ ಇಲ್ಲ

ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲ..

ಕಠ್ಮಂಡು: ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಸಯೀದ್ ಅಕ್ಬರುದ್ದೀನ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ನೇಪಾಳದ ಕಠ್ಮಂಡುವಿನಲ್ಲಿ ಇಂದಿನಿಂದ ಆರಂಭವಾಗಿರುವ ಎರಡು ದಿನಗಳ 18ನೇ ಸಾರ್ಕ್ ಶೃಂಗ ಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಔಪಚಾರಿಕ ಅಲ್ಲದಿದ್ದರೂ ಅನೌಚಾರಿಕ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಉಭಯ ನಾಯಕರ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಅಕ್ಬರುದ್ದೀನ್ ಹೇಳಿದ್ದಾರೆ.

ನಾವು ಮಹತ್ವಪೂರ್ಣ ಮತ್ತು ಅರ್ಥಪೂರ್ಣ ದ್ವಿಪಕ್ಷೀಯ ಮಾತುಕತೆ ನಡೆಸಬೇಕಾಗಿದ್ದು, ಇಂದು ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಮಾಲ್ಡಿವ್ಸ್ ಹಾಗೂ ಬಾಂಗ್ಲಾದೇಶ, ಭುತಾನ್ ಪ್ರಧಾನಿಗಳೊಂದಿಗೆ ಮೋದಿ ಅವರ ದ್ವಿಪಕ್ಷೀಯ ಸಭೆ ನಿಗದಿಯಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಇದೇ ವೇಳೆ, ಮಾತುಕತೆಗೆ ಸಂಬಂಧಿಸಿದಂತೆ 'ಚೆಂಡು ಭಾರತದ ಅಂಗಳದಲ್ಲಿದೆ' ಎಂಬ ಪಾಕ್ ಪ್ರಧಾನಿ ಷರೀಫ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಕ್ಬರುದ್ದೀನ್, ಅರ್ಥಪೂರ್ಣ ಮಾತಕತೆಯ ಬಗ್ಗೆ ಭಾರತಕ್ಕೆ ಒಲವು ಇದೆ. ಆದರೆ ಇದನ್ನು ಪಾಕಿಸ್ತಾನ ಖಚಿತಪಡಿಸಬೇಕು ಮತ್ತು ಅರ್ಥಪೂರ್ಣ ಮಾತುಕತೆ ಅಂದರೆ ಏನೂ ಅಂತ ಅವರಿಗೂ ಗೊತ್ತು. ಅದನ್ನು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ನಿನ್ನೆಯಷ್ಟೇ ಭಾರತದ ಜತೆ ಮಾತುಕತೆಗೆ ನಾವು ಸಿದ್ಧ ಎಂದು ಹೇಳಿದ್ದ ನವಾಜ್ ಷರೀಫ್, 'ಚೆಂಡು ಭಾರತದ ಅಂಗಳದಲ್ಲಿದೆ' ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ