ಅಲಿಘಡ ಮುಸ್ಲೀಂ ವಿಶ್ವವಿದ್ಯಾಲಯ 
ದೇಶ

ರಾಜಕೀಯ ಆಟದಿಂದ ಕೋಮುಗಲಭೆ ಉಂಟಾಗುತ್ತದೆ: ಜಮೀರ್ ಉದ್ದೀನ್

ರಾಜಾ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಅಲಿಗಡ...

ಅಲಿಘಡ: ರಾಜಾ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಅಲಿಘಡ ಮುಸ್ಲೀಂ ವಿಶ್ವವಿದ್ಯಾಲಯದಲ್ಲಿ ಆಚರಿಸುವುದರಿಂದ ಕೋಮುಗಲಭೆ ಉಂಟಾಗುತ್ತದೆ ಎಂದು ಎಎಂಯು ಕುಲಪತಿ ಜಮೀರ್ ಉದ್ದೀನ್ ಅಭಿಪ್ರಾಯ ಪಟ್ಟಿದ್ದಾರೆ.

ಡಿ.1 ರಂದು ಸ್ವಾತಂತ್ರ್ಯ ಹೋರಾಟಗಾರ ರಾಜಾ ಮಹೇಂದ್ರ ಪ್ರತಾಪ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಅಲಿಘಡ ಮುಸ್ಲೀಂ ವಿಶ್ವವಿದ್ಯಾಲಯದಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಏರ್ಪಡಿಸಿದೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್ ಪಕ್ಷಗಳನ್ನು ವಿಶ್ವವಿದ್ಯಾಲಯದ ಒಳಗೆ ಕಾಲಿಡಲು ಬಿಡುವುದಿಲ್ಲ ಎಂದು ಎಎಂಯು ಸಂಘಟನೆಗಳು ಹೇಳುತ್ತಿದೆ.ರಾಜಕೀಯ ಆಟದಿಂದಾಗಿ ದೇಶದಲ್ಲಿ ಕೋಮು ಗಲಭೆ ಉಂಟಾಗುವ ಸಂಭವವಿದ್ದು, ಕೂಡಲೇ ಆಚರಣೆಯನ್ನು ಹಿಂಪಡೆಯುವಂತೆ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಿಗೆ ಜಮೀರ್ ಉದ್ದೀನ್ ಪತ್ರ ಬರೆದಿದ್ದಾರೆ.

ಇದೊಂದು ರಾಜಕೀಯ ಆಟವಾಗಿರಬಹುದು ಆದರೆ ಇದೇ ಆಟ ಮುಂದೆ ಗಂಭೀರ ಸಮಸ್ಯೆ ಹುಟ್ಟುಹಾಕಿ ದೇಶದ ಶಾಂತಿಯನ್ನು ಹಾಳುಮಾಡಬಹುದು. ಕೆಲವು ಪಕ್ಷಗಳು ಈ ಆಚರಣೆಗೆ ಬೆಂಬಲ ಸೂಚಿಸುತ್ತಿದ್ದರೆ ಮತ್ತೆ ಕೆಲವು ಪಕ್ಷಗಳು ಕಾರ್ಯಕ್ರಮ ಮುಂದುವರೆಯಲು ಬಿಡುವುದಿಲ್ಲ ಎಂದು ಹೇಳುತ್ತಿವೆ. ಆದ್ದರಿಂದ ಅಶಾಂತಿ ಹುಟ್ಟುಹಾಕುವ ಕಾರ್ಯಕ್ರಮಗಳನ್ನು ವಿಶ್ವವಿದ್ಯಾಲಯದಲ್ಲಿ ಆಚರಿಸುವುದು ಬೇಡ ಎಂದು ಪತ್ರದಲ್ಲಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಪತ್ರದ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಮೃತಿ ಇರಾನಿ ಅವರು ಈವರೆಗೆ ಯಾವುದೇ ಪತ್ರವೂ ತಮಗೆ ತಲುಪಿಲ್ಲ ಎಂದು ಹೇಳಿದ್ದು, ಪತ್ರ ತಲುಪಿದ ನಂತರವಷ್ಟೇ ಈ ಕುರಿತು ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video