ಮತ್ತೆ ದಾಳಿ: ಮುಂದುವರೆದ ಪಾಕ್ ಪುಂಡಾಟಿಕೆ
ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಪುಂಡಾಟಿಕೆಯನ್ನು ಮುಂದುವರೆಸಿದ್ದು...
ನವದೆಹಲಿ: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಪುಂಡಾಟಿಕೆಯನ್ನು ಮುಂದುವರೆಸಿದ್ದು, ಮತ್ತೆ ಭಾರತದ ಸೇನಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದೆ.
ಕಳೆದ ಒಂದು ವಾರದಿಂದ ಹೆಚ್ಚು ಬಾರಿ ಗಡಿ ನಿಯಮ ಉಲ್ಲಂಘನೆ ಮಾಡುತ್ತಿರುವ ಪಾಕ್ ಸೇನಾ ಪಡೆ, ಭಾನುವಾರ ಮತ್ತೆ ಭಾರತೀಯ ಸೇನಾ ಪಡೆ ಮೇಲೆ ದಾಳಿ ಮಾಡಿದೆ.
ಜಮ್ಮು ಕಾಶ್ಮೀರದ ಸಾಂಬಾ ವಲಯದಲ್ಲಿ ಗುಂಡಿನ ದಾಳಿ ನಡೆಸಿದ್ದು, ಬಿಎಸ್ಎಫ್ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕ್ ಸೇನಾ ಪಡೆ ಫೈರಿಂಗ್ ಮಾಡಿದೆ. ಈ ಮೂಲಕ ಪಾಕ್ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.