ರ್ಯಾಲಿ ಹಿನ್ನಲೆಯಲ್ಲಿ ವೇದಿಕೆಗೆ ಆಗಮಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ರಾಹುಲ್ ಸಿನ್ಹಾ ಅವರು ಸ್ವಾಗತಿಸಿದರು. 
ದೇಶ

ಮಮತಾ ಮುಕ್ತ ಬಂಗಾಲ ನಮ್ಮ ಗುರಿ: ಅಮಿತ್ ಶಾ

ಮಮತಾ ಮುಕ್ತ ಪಶ್ಚಿಮ ಬಂಗಾಳ ನಮ್ಮ ಗುರಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೋಲ್ಕತಾದಲ್ಲಿ ಶನಿವಾರ ಹೇಳಿದ್ದಾರೆ.

ಕೋಲ್ಕತಾ: ಮಮತಾ ಮುಕ್ತ ಪಶ್ಚಿಮ ಬಂಗಾಳ ನಮ್ಮ ಗುರಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೋಲ್ಕತಾದಲ್ಲಿ ಶನಿವಾರ ಹೇಳಿದ್ದಾರೆ.

ಕೋಲ್ಕತಾದಲ್ಲಿ ಆಯೋಜಿಸಲಾಗಿರುವ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು ಮಮತಾ ಬ್ಯಾನರ್ಜಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಶರದಾ ಚಿಟ್ ಫಂಡ್ ಹಗರಣದಲ್ಲಿ ಜನರ ಲಕ್ಷಾಂತರ ಹಣ ಸಿಕ್ಕಿ ಹಾಕಿಕೊಂಡಿದೆ. ಸುಮಾರು 17 ಲಕ್ಷ ಜನರು ಹಣ ತೊಡಗಿಸಿ ಹಣ ಕಳೆದುಕೊಂಡಿದ್ದಾರೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಬಗ್ಗೆ ಏಕೆ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಶಾ ಪ್ರಶ್ನಿಸಿದರು.

ಅಲ್ಲದೆ ಬುರ್ದ್ವಾನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾ, ಬುರ್ದ್ವಾನ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಮಮತಾ ಬ್ಯಾನರ್ಜಿ ಅವರು ರಕ್ಷಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಮುಂಬರುವ 2015ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಲಿದ್ದು, 2015 ನವೆಂಬರ್ 30 ತೃಣಮೂಲ ಕಾಂಗ್ರೆಸ್ ಪಕ್ಷದ ಪತನದ ದಿನವಾಗಲಿದೆ ಎಂದು ಶಾ ಹೇಳಿದರು.

ಬಿಜೆಪಿಯನ್ನು ಕಂಡರೆ ದೀದಿಗೆ ಭಯ..!
ಬಿಜೆಪಿ ಪಕ್ಷದ ಬೆಳವಣಿಗೆಯನ್ನು ಕಂಡು ದೀದಿಗೆ ಭಯವಾಗಿದ್ದು, ಹೀಗಾಗಿಯೇ ರ್ಯಾಲಿಗೆ ಅನುಮತಿ ನೀಡಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. 'ದೇಶದ ಜನತೆ ಬಿಜೆಪಿ ಪರವಿದ್ದು, ಅಭಿವೃದ್ಧಿ ಪರ ಮತ ಚಲಾಯಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಈ ಏಳ್ಗೆಯನ್ನು ಕಂಡು ದೀದಿಗೆ ಭಯವಾಗಿದ್ದು, ಹೀಗಾಗಿ ರ್ಯಾಲಿಗೆ ಅನುಮತಿ ನೀಡಲಿಲ್ಲ. ಆದರೆ ನ್ಯಾಯಾಲಯ ನಮಗೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿಯನ್ನು ಕಂಡರೆ ಎಷ್ಟು ಭಯ ಎನ್ನುವುದಕ್ಕೆ ಈ ವೇದಿಕೆಯೇ ಸಾಕ್ಷಿ. ಹೆಚ್ಚು ಜನರು ಸೇರುತ್ತಾರೆ ಎಂಬ ಭಯದಿಂದ ವೇದಿಕೆಯನ್ನು ಚಿಕ್ಕದಾಗಿ ಮಾಡಿಸಿದ್ದಾರೆ. ಆದರೆ ಬಿಜೆಪಿ ಬೆಂಬಲಿಗರು, ಕಾರ್ಯಕರ್ತರು ಮತ್ತು ಬಂಗಾಲದ ಜನತೆಯ ಹೃದಯ ದೊಡ್ಡದಾಗಿದೆ. ಹೀಗಾಗಿಯೇ ಲಕ್ಷಾಂತರ ಸಂಖ್ಯೆಯಲ್ಲಿ ರ್ಯಾಲಿಗೆ ಆಗಮಿಸುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ ಎಂದು ಅಮಿತ್ ಶಾ ಹೇಳಿದರು.

ರ್ಯಾಲಿಗೆ ಅನುಮತಿ ನಿರಾಕರಿಸಿದ್ದ ದೀದಿ
ಕೋಲ್ಕತಾದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ರ್ಯಾಲಿ ನಡೆಸಲು ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯಾಲಯ ಭದ್ರತೆಯ ಕೆಲ ಷರತ್ತುಗಳನ್ನು ವಿಧಿಸಿ ರ್ಯಾಲಿಗೆ ಅನುಮತಿ ನೀಡಿತ್ತು. ಹೀಗಾಗಿ ಇಂದು ನಡೆದ ರ್ಯಾಲಿಗೆ ಕೋಲ್ಕತಾ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!