ನಗರಕ್ಕಾಗಮಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ 
ದೇಶ

ನಗರಕ್ಕಾಗಮಿಸಿದ ಬಿಜೆಪಿ ಅಧ್ಯಕ್ಷ ಶಾ

ರಾಷ್ಟ್ರೀಯ ಕಾರ್ಯಕಾರಿಣಿಯ ಹಿನ್ನೆಲೆಯಲ್ಲಿ ಬುಧವಾರ ಸಂಜೆ ನಗರಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಭವ್ಯ ಸ್ವಾಗತ ದೊರೆಯಿತು...

ಬೆಂಗಳೂರು: ರಾಷ್ಟ್ರೀಯ ಕಾರ್ಯಕಾರಿಣಿಯ ಹಿನ್ನೆಲೆಯಲ್ಲಿ ಬುಧವಾರ ಸಂಜೆ ನಗರಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಭವ್ಯ ಸ್ವಾಗತ ದೊರೆಯಿತು.

ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಜೆ 7.15ಕ್ಕೆ ಬಂದಿಳಿದ ಅವರನ್ನು, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರಾದ ಸದಾನಂದಗೌಡ, ಅನಂತ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು, ಪುಷ್ಪಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ನಿಲ್ದಾಣದ ಗಣ್ಯಾತೀಗಣ್ಯರ ವಿಶೇಷ ಆಗಮನದ ಮುಖ್ಯದ್ವಾರದಲ್ಲಿ ಹೊರ ಬಂದ ಅಮಿತ್ ಶಾಗೆ, ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪಕ್ಷದ ಕಾರ್ಯಕರ್ತರು ಜನಪದ ಕಲಾ ತಂಡಗಳ ವಾದ್ಯದೊಂದಿಗೆ, ಜೈ ಕಾರ ಕೂಗುವ ಮೂಲಕ ಸ್ವಾಗತ ಕೋರಿದರು. ಕಾರಿನಲ್ಲಿಯೇ ನಿಂತು ಕಾರ್ಯಕರ್ತರತ್ತ ಕೈಬೀಸಿ ಹರ್ಷ ವ್ಯಕ್ತಪಡಿಸಿದ ಅವರು, ನಂತರ ಬಿಗಿ ಭದ್ರತೆಯೊಂದಿಗೆ ನಗರಕ್ಕೆ ಆಗಮಿಸಿದರು. ಮಾಜಿ ಸಚಿವರಾದ ಸಿ.ಟಿ.ರವಿ, ಕಟ್ಟಾ ಸುಬ್ರಮಣ್ಯನಾಯ್ಡು, ಶಾಸಕರಾದ ಎಸ್. ಆರ್. ವಿಶ್ವ ನಾಥ್, ಎಸ್. ಮುನಿರಾಜು ಸೇರಿದಂತೆ ಹಲವು ಮುಖಂಡರು ಈ ವೇಳೆ ಹಾಜರಿದ್ದರು. ಅಮಿತ್ ಶಾ ಆಗಮನಕ್ಕೂ ಮುನ್ನ ಕಾರ್ಯಕರ್ತರೊಂದಿಗೆ ಸ್ವಾಗತ ಕೋರಲು ಕಾಯುತ್ತಿದ್ದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ವೀರಗಾಸೆ ತಂಡದೊಂದಿಗೆ ಹೆಜ್ಜೆ ಹಾಕಿ, ಕಾರ್ಯಕರ್ತರನ್ನು ರಂಜಿಸಿದ್ದ ವಿಶೇಷವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ