ಶ್ರೀನಗರ: ಜಮ್ಮು ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ನಡೆಯುತ್ತಿರುವ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ.
ಉತ್ತರ ಕಾಶ್ಮೀರ ಪಾಂತ್ಯದ ತಂಗ್ ಮಾರ್ಗ್ ದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದು, ಉಗ್ರರ ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ಬಾರಿ ಗುಂಡಿನ ಕಾಳಗ ನಡೆಯುತ್ತಿದೆ. ಈ ವೇಳೆ ಉಗ್ರರ ಗುಂಡೇಟಿಗೆ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿಯ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಕಟ್ಟಡವೊಂದರಲ್ಲಿ ಅಡಗಿರುವ ಉಗ್ರರನ್ನು ದಮನಕ್ಕೆ ಭದ್ರತಾ ಸಿಬ್ಬಂದಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಉಗ್ರರು ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕೆಯನ್ನು ಭದ್ರತಾ ಪಡೆ ಸಿಬ್ಬಂದಿಗಳು ವ್ಯಕ್ತಪಡಿಸಿದ್ದಾರೆ.
ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು ಉಗ್ರರು ಅಡಗಿ ಕುಳಿತಿರುವ ಮನೆಯನ್ನು ಸುತ್ತುವರೆದಿದ್ದು, ಉಗ್ರರ ದಮನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.