ಸೋನಿಯಾ ಗಾಂಧಿ 
ದೇಶ

ಗಿರಿರಾಜ್ ಸಿಂಗ್ ಜನಾಂಗೀಯ ಹೇಳಿಕೆ: ಸಂಕುಚಿತ ಬುದ್ಧಿಯ ಜನರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ; ಸೋನಿಯಾ

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಜನಾಂಗೀಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ನವದೆಹಲಿ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಜನಾಂಗೀಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಸಚಿವರ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೆ, ಪಕ್ಷ ಮುಖ್ಯಸ್ಥೆ ಸೋನಿಯಾ ಗಾಂಧಿ ಮಾತ್ರ, ಸಂಕುಚಿತ ಬುದ್ಧಿಯ ಜನರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

ಈ ಮಧ್ಯೆ, ವಿವಾದಾತ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಷಾದ ವ್ಯಕ್ತಪಡಿಸಿರುವ ಗಿರಿರಾಜ್ ಸಿಂಗ್ಸ ನನ್ನ ಹೇಳಿಕೆಯಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನೋವಾಗಿದ್ದರೆ, ವಿಷಾದ ವ್ಯಕ್ತಪಡಿಸುತ್ತೇನೆ ಎಂದು
ಹೇಳಿದ್ದಾರೆ.

ನಿನ್ನೆ ದೆಹಲಿಯಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ್ದ ಗಿರಿರಾಜ್ ಸಿಂಗ್, ರಾಜೀವ್ ಗಾಂಧಿ ಅವರು ನೈಜೀರಿಯಾಗೆ ಸೇರಿದ ಹೆಣ್ಣು ಮಗಳನ್ನು ಮದುವೆಯಾಗಿದ್ದರೆ, ಆ ಹೆಣ್ಣು ಮಗಳು ಬೆಳ್ಳಗಿರದಿದ್ದರೆ ಆಕೆಗೆ ಕಾಂಗ್ರೆಸ್ ಪಕ್ಷ ಅಧ್ಯಕ್ಷೆ ಸ್ಥಾನ ನೀಡುತ್ತಿತ್ತೇ? ಎಂದು ಹೇಳುವ ಮೂಲಕ ಹೊಸ ವಿವಾದವೊಂದನ್ನು ಸೃಷ್ಟಿಸಿದ್ದರು.

ಗಿರಿರಾಜ್ ಅವರ ಈ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ವಿರೋಧಕ್ಕೆ ವ್ಯಕ್ತವಾಗಿತ್ತಲ್ಲದೆ, ರಸ್ತೆಗಳಲ್ಲಿ ಪ್ರತಿಭಟನೆಗಿಳಿದು ಗಿರಿರಾಜ್ ಕ್ಷಮಾಪಣೆ ಕೋರುವಂತೆ ಆಗ್ರಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

'ಅಶ್ಲೀಲ, ಅಸಭ್ಯ, ವಿಕೃತ': TVK ಮಹಿಳಾ ಅಭ್ಯರ್ಥಿ ಕುರಿತ ಸ್ಟಾಲಿನ್ ಹೇಳಿ ಖಂಡಿಸಿದ CM ವಿಜಯ್; ಚುನಾವಣಾ ಆಯೋಗಕ್ಕೆ ದೂರು

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video