ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ 
ದೇಶ

ಲಾಲ್ ಮಸೀದಿ ಪ್ರಕರಣ: ಪರ್ವೇಜ್ ಮುಷರಫ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ  ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯವು...

ಇಸ್ಲಾಮಾಬಾದ್: ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ  ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

ಪ್ರಕರಣ ಕುರಿತಂತೆ ಇಂದು ವಿಚಾರಣೆ ನಡೆಸಿದ ಇಸ್ಲಾಮಾಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ವಿಚಾರಣಾ ಹಾಜರಾತಿ ವಿನಾಯಿತಿ ಕುರಿತಂತೆ ಮುಷರಫ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದು, ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಅಲ್ಲದೆ, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿದೆ.

ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ  ಹತ್ಯೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಹೆಸರು ಕೇಳಿಬಂದಿತ್ತು. ಇದರಂತೆ ಪೊಲೀಸರು ಪರ್ವೇಜ್ ಮುಷರಫ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಆರೋಗ್ಯ ಹಾಗೂ ಭದ್ರತೆಗಳ ನೆಪ ಹೂಡತ್ತಲೇ ನ್ಯಾಯಾಲಯದಿಂದ ವಿನಾಯಿತಿ ಪಡೆದು ವಿಚಾರಣೆಗೆ ಪರ್ವೇಜ್ ಮುಷರಫ್ ಹಾಜರಾಗುತ್ತಿರಲಿಲ್ಲ. ಹಾಗಾಗಿ ಪರ್ವೇಜ್ ಮುಷರಫ್ ಅವರ ಈ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಮುಷರಫ್ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT