ಸ್ಮೃತಿ ಇರಾನಿ 
ದೇಶ

ಟ್ರಯಲ್ ರೂಂನಲ್ಲಿ ಹಿಡನ್ ಕ್ಯಾಮರಾ ಪತ್ತೆ ಹಚ್ಚಿದ ಸ್ಮೃತಿ ಇರಾನಿ, ಶೋರೂಂ ವಿರುದ್ಧ ಕೇಸ್ ದಾಖಲು

ರಜೆಯಲ್ಲಿ ಗೋವಾ ಪ್ರವಾಸ ಕೈಗೊಂಡಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕ್ಯಾಂಡೋಲಿಮ್ ನಗರದಲ್ಲಿರುವ ಫ್ಯಾಬ್ ಇಂಡಿಯಾದ...

ಕ್ಯಾಂಡೋಲಿಮ್(ಗೋವಾ): ರಜೆಯಲ್ಲಿ ಗೋವಾ ಪ್ರವಾಸ ಕೈಗೊಂಡಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕ್ಯಾಂಡೋಲಿಮ್ ನಗರದಲ್ಲಿರುವ ಫ್ಯಾಬ್ ಇಂಡಿಯಾದ ಬಟ್ಟೆ ಶೋ ರೂಂನಲ್ಲಿ ಬಟ್ಟೆ ಖರೀದಿಸಲು ಹೋದ ಸಂದರ್ಭದಲ್ಲಿ ಟ್ರಯಲ್ ರೂಂನಲ್ಲಿ ಹಿಡನ್ ಕ್ಯಾಮರಾ ಇರುವುದನ್ನು ಪತ್ತೆ ಮಾಡಿದ್ದು, ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿ ಫ್ಯಾಬ್ ಇಂಡಿಯಾ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನದ ವೇಳೆ ಪ್ರವಾಸದ ನಡುವೆ ಮಳಿಗೆಗೆ ತೆರಳಿದ ಸಚಿವೆ ಇರಾನಿ ಬಟ್ಟೆಗಳನ್ನು ಖರೀದಿಸಿ ಟ್ರಯಲ್‌ ರೂಮ್‌ಗೆ ತೆರಳಿದ್ದಾರೆ. ಟ್ರಯಲ್ ರೂಂನಲ್ಲಿ ಹಿಡನ್‌ ಕ್ಯಾಮರಾ ಇರುವುದು ಕಂಡು ಬಂದಿದೆ. ಈ ವೇಳೆ ಜೊತೆಯಲ್ಲಿದ್ದ ಪತಿಗೆ ವಿಷಯ ತಿಳಿಸಿದ್ದಾರೆ. ಕೂಡಲೆ ಸ್ಥಳೀಯ ಬಿಜೆಪಿ ಶಾಸಕ ಮೈಕಲ್‌ ಲೋಬೊರನ್ನು ಸ್ಥಳಕ್ಕೆ ಕರೆಸಿಕೊಂಡು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಲೋಬೊ ಸ್ಥಳೀಯ ಪೊಲೀಸರನ್ನು ಕರೆಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಟ್ರಯಲ್ ರೂಂನಲ್ಲಿದ್ದ ಹಿಡನ್ ಕ್ಯಾಮರಾ ಮತ್ತು ಹಾರ್ಡ್ ಡಿಸ್ಕನ್ನು ವಶಪಡಸಿಕೊಂಡಿದ್ದು, ಎಫ್ ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಮಳಿಗೆಯ ಮಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT