ಲಾರಿ ಜೀಪ್ ನಡುವೆ ಮುಖಾಮುಖಿ ಡಿಕ್ಕಿ(ಸಾಂದರ್ಭಿಕ ಚಿತ್ರ) 
ದೇಶ

ಲಾರಿ, ಜೀಪ್ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರ ಸಾವು

ಚಂದ್ರಗ್ರಹಣ ನಿಮಿತ್ತ ವಿಶೇಷ ದರ್ಶನಕ್ಕಾಗಿ ಶ್ರೀಶೈಲಂಗೆ ತೂಫಾನ್ ಜೀಪ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಹಾಗೂ ಜೀಪಿನ ನಡುವೆ

ವೆಂಕಟಾಪುರಂ(ಆಂಧ್ರ): ಚಂದ್ರಗ್ರಹಣ ನಿಮಿತ್ತ ವಿಶೇಷ ದರ್ಶನಕ್ಕಾಗಿ ಶ್ರೀಶೈಲಂಗೆ ತೂಫಾನ್ ಜೀಪ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಹಾಗೂ ಜೀಪಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದ 16 ಮಂದಿ ನಿವಾಸಿಗಳು ತೂಫಾನ್ ಜೀಪಿನಲ್ಲಿ ಆಂಧ್ರದ ಶ್ರೀಶೈಲಕ್ಕೆ ತೆರಳುತ್ತಿದ್ದರು. ಆದರೆ ಆಂಧ್ರದ ಕರ್ನೂಲ್ ಜಿಲ್ಲೆಯ ವೆಂಕಟಾಪುರಂ ಬಳಿ ಜೀಪು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಗಾಯಾಳುಗಳನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆತ್ಮಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಚಾಲಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಮೃತರೆಲ್ಲರೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ನಿವಾಸಿಗಳಾದ ಪದ್ಮಾವತಿ(55), ಸರೋಜ(50), ಶಾಂತಾಬಾಯಿ(75) ಮತ್ತು ಸೋಮಶೇಖರ್ ಗೋಲಾ(65) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!