33 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ
ಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 33 ಭಾರತೀಯ ಮೀನುಗಾರರನ್ನು...
ರಾಮೇಶ್ವರಂ: ಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 33 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯ ಅಧಿಕಾರಿಗಳು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ನಿಡೆಂತೀವು ಬಳಿ ಜಲಗಡಿ ಉಲ್ಲಂಘಿಸಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಿದ್ದು, ಬಂಧಿತ ಮೀನುಗಾರರಲ್ಲಿ ಹೆಚ್ಚಿನವರು ನಾಗಪಟ್ಟಣಂ ಜಿಲ್ಲೆಗೆ ಸೇರಿದವರು.
ಬಂಧಿತರಿಂದ 5 ಬೋಟುಗಳನ್ನು ಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ. ನಂತರ ಇವರನ್ನು ಜಾಫ್ನಾ ಜಿಲ್ಲೆಯ ಬಂದರು ಪಟ್ಟಣ ಕಂಗೆಸಂತುರೈಗೆ ಕರೆದೊಯ್ಯಲಾಗಿದೆ ಎಂದು ನಾಗಪಟ್ಟಣಂ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸುಬ್ಬುರಾಜ್ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.