ದೇಶ

ಬಿಜೆಪಿ ಸಂಸ್ಥಾಪನಾ ದಿನ: ಪಕ್ಷದ ಸಂಸ್ಥಾಪಕ ಸದಸ್ಯ ಆಡ್ವಾಣಿಗಿರಲಿಲ್ಲ ಆಹ್ವಾನ

Lingaraj Badiger

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಸೋಮವಾರ ದೆಹಲಿಯ ಪ್ರಧಾನ ಕಚೇರಿಯಲ್ಲಿ ತನ್ನ 35 ಸಂಸ್ಥಾಪನಾ ದಿನವನ್ನು ಆಚರಿಸಿಕೊಂಡಿತು. ಆದರೆ ಈ ಸಮಾರಂಭಕ್ಕೆ ಪ್ರಮುಖ ಸಂಸ್ಥಾಪಕರಲ್ಲಿ ಒಬ್ಬರಾದ ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಅವರಿಗೆ ಆಹ್ವಾನ ನೀಡಿರಲಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದ ಬಗ್ಗೆ 87 ವರ್ಷದ ಹಿರಿಯ ನಾಯಕನಿಗೆ ಯಾವುದೇ ಮಾಹಿತಿ ಆಗಲಿ, ಸಂದೇಶ ಸಹ ಕೊಟ್ಟಿಲ್ಲಿ ಎಂದು ಹೆಸರು ಹೇಳಲಿಚ್ಚಿಸದ ನಾಯಕರೊಬ್ಬರು ತಿಳಿಸಿದ್ದಾರೆ.

ಕಳೆದ ಶನಿವಾರ ಬೆಂಗಳೂರಿನಲ್ಲಿ ಅಂತ್ಯಗೊಂಡ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲೂ ಆಡ್ವಾಣಿ ಅವರನ್ನು ಕಡೆಗಣಿಸಲಾಗಿತ್ತು. ಹೀಗಾಗಿಯೇ ಅವರು ಮಾರ್ಗದರ್ಶಿ ಭಾಷಣ ಮಾಡುವಂತೆ ಅಮಿತ್ ಶಾ ಮಾಡಿದ ಮನವಿಯನ್ನು ತಿರಸ್ಕರಿಸಿದ್ದರು.

ಮೂರು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆಡ್ವಾಣಿ ಅವರು 2ನೇ ಬಾರಿಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿನ ಭಾಷಣದಿಂದ ಹಿಂದೆ ಸರಿದಿದ್ದರು. ಈ ಹಿಂದೆ ಅಂದರೆ ಲೋಕಸಭಾ ಚುನಾವಣೆಗೂ ಮುನ್ನ ಗೋವಾದಲ್ಲಿ ನಡೆದಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವಾಗಲೂ ಕೂಡ ಅಡ್ವಾಣಿ ಅವರು ಭಾಷಣ ಮಾಡಿರಲಿಲ್ಲ. ಆ ಮೂಲಕ ಮೋದಿ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದರು.

SCROLL FOR NEXT