ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪಿಯಾನ ಜಿಲ್ಲೆಯ ಅಂಶಿಪೋರಾ ಪ್ರದೇಶದಲ್ಲಿ ಸೋಮವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.
ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಮುಖ್ಯ ಪೇದೆ ಹಾಗೂ ಇಬ್ಬರು ಪೊಲೀಸ್ ಪೇದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ನಡೆದ ಎರಡು ದಾಳಿ ಇದಾಗಿದ್ದು, ಇದಕ್ಕೂ ಮುನ್ನ ಬಾರಾಮುಲ್ಲಾದ ಪಟನಾ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಓರ್ವ ಪೊಲೀಸ್ ಪೇದೆ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ.