ನವದೆಹಲಿ: ಹತ್ತಾರು ಕೊಲೆ ಪ್ರಕರಣಗಳ ಆರೋಪಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ನೀರಜ್ ನನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮೋಸ್ಟ್ ವಾಂಟೆಡ್ ಕ್ರಿಮಿನಲ್ ಪಟ್ಟಿಯಲ್ಲಿರುವ ನೀರಜ್ ವಿರುದ್ಧ ಹಲವು ಠಾಣೆಗಳಲ್ಲಿ ಹತ್ತಾರು ಕೊಲೆ ಪ್ರಕರಣಗಳು ದಾಖಲಾಗಿದ್ದವು. ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ನೀರಜ್ ನನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವ ನಿರೀಜ್ ಗೆ ಭೂಗತ ಜಗತ್ತಿನೊಂದಿಗೆ ನಂಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.