ವಿ.ಕೆ. ಸಿಂಗ್ 
ದೇಶ

ಜ.ವಿ.ಕೆ.ಸಿಂಗ್ ಹೊಸ ವಿವಾದ

ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ. ಸಿಂಗ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಯೆಮೆನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯವನ್ನು ...

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ. ಸಿಂಗ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಯೆಮೆನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯವನ್ನು ಹಗುರವಾಗಿ ಕಾಣುವಂಥ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪ ಈಗ ಅವರ ವಿರುದ್ಧ ಕೇಳಿ ಬಂದಿದೆ. ಯೆಮೆನ್‍ನ `ಆಪರೇಷನ್ ರಾಹತ್' ಒಂದು ಕ್ಲಿಷ್ಟಕರ ಕಾರ್ಯಾಚರಣೆ. ಆದರೆ, ಪಾಕಿಸ್ತಾನದ ರಾಯಭಾರ ಕಚೇರಿಗೆ ಭೇಟಿ ಕೊಟ್ಟಾಗ ಆಗುವಷ್ಟು ಉದ್ವೇಗ ಈ ಕಾರ್ಯಾಚರಣೆ ವೇಳೆ ಆಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ. ಈ ಹೇಳಿಕೆ ಕುರಿತು ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾ ಗಿದೆ. ಈ ಹಿಂದೆ ಪಾಕ್ ರಾಜ ತಾಂತ್ರಿಕ ಕಚೇರಿಯಲ್ಲಿ ಆಯೋಜಿಸಿದ್ದಪಾಕ್ ರಾಷ್ಟ್ರೀಯ ದಿನಾಚರಣೆಯಲ್ಲಿ  ಪಾಲ್ಗೊಂಡು ಸಿಂಗ್ ವಿವಾದ ಸೃಷ್ಟಿಸಿದ್ದರು. ಇದೇ ವೇಳೆ, ವಿವಾದಿತ ಹೇಳಿಕೆಯನ್ನು ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಹರಿಹಾಯ್ದಿರುವ ವಿ.ಕೆ.ಸಿಂಗ್, ಮಾಧ್ಯಮ ಗಳೆಲ್ಲ `ಪ್ರೆಸ್‍ಟಿಟ್ಯೂಟ್'ಗಳು ಎಂದು ಕರೆ ಯುವ ಮೂಲಕ ಮತ್ತೊಂದು ಅನಪೇಕ್ಷಿತ ಹೇಳಿಕೆ ನೀಡಿದ್ದಾರೆ. ಸಿಂಗ್ ಅವರ ಭಾಷೆ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ.
ಇಂತಹ ಹೇಳಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಪ್ರತಿಪಕ್ಷಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!