ಯೆಮೆನ್ ನಿಂದ 5500 ಭಾರತೀಯರ ರಕ್ಷಣೆ 
ದೇಶ

ಯುದ್ಧಗ್ರಸ್ಥ ಯೆಮೆನ್ ನಿಂದ 5,500 ಭಾರತೀಯರ ರಕ್ಷಣೆ

ಆಂತರಿಕ ಸಂಘರ್ಷದಿಂದ ನಲುಗುತ್ತಿರುವ ಯೆಮೆನ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸುಮಾರು 5,500 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.

ನವದೆಹಲಿ: ಆಂತರಿಕ ಸಂಘರ್ಷದಿಂದ ನಲುಗುತ್ತಿರುವ ಯೆಮೆನ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸುಮಾರು 5,500 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.

ಯೆಮೆನ್‌ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೂರಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೈಗೊಂಡಿದ್ದ ಸ್ವದೇಶಿ ನಾಗರೀಕರ ರಕ್ಷಣಾ ಕಾರ್ಯಾಚರಣೆಯು ಗುರುವಾರ ಅಂತ್ಯಗೊಂಡಿದೆ. ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿತ್ತು.

ಯೆಮೆನ್ ನಿಂದ ಇಲ್ಲಿಯವರೆಗೂ 5,500ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದ್ದು, ಇದರಲ್ಲಿ 4640 ಮಂದಿ ಭಾರತೀಯರಾಗಿದ್ದಾರೆ. ಇನ್ನುಳಿದಂತೆ 960 ವಿದೇಶಿಯರು ಎಂದು ತಿಳಿದು ಬಂದಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 349 ಮಂದಿಯನ್ನು ರಕ್ಷಿಸಲಾಗಿದೆ. ಇದರಲ್ಲಿ 46 ಮಂದಿ ಮಾತ್ರ ಭಾರತೀಯರಿದ್ದು, ಉಳಿದವರು ವಿದೇಶಿಗರು ಎನ್ನಲಾಗಿದೆ.

ಅಂತಿಮ ಕಾರ್ಯಚರಣೆಯ ವಿಶೇಷ ಸಂಗತಿ ಎಂದರೆ 3 ದಿನದ ಹಸುಗೂಸು ಹಾಗೂ ಅದನ್ನು ಪೋಷಿಸುತ್ತಿದ್ದ ವೈದ್ಯರನ್ನೂ ಕೂಡ ಸುರಕ್ಷಿತವಾಗಿ ಅವರ ರಾಷ್ಟ್ರಕ್ಕೆ ಭಾರತೀಯ ರಕ್ಷಣಾ ಪಡೆ ತಲುಪಿಸಿದೆ. ಕಾರ್ಯಾಚರಣೆ ಮುಗಿಸಿಕೊಂಡು ನೇರವಾಗಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಚಿವ ವಿ.ಕೆ ಸಿಂಗ್ ಅವರಿಗೆ ಭವ್ಯ ಸ್ವಾಗತ ಸಿಕ್ಕಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT