ದೇಶ

ಉಗ್ರ ಲಖ್ವಿ ಬಿಡುಗಡೆ ದುರದೃಷ್ಟಕರ: ರಾಜನಾಥ್ ಸಿಂಗ್

Lingaraj Badiger

ಲಖನೌ: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನ ಸರ್ಕಾರ ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿಯನ್ನು ಜೈಲಿನಿಂದ ಬಿಡುಗಡೆ ಮಾಡಿರುವುದು ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಲಖ್ವಿ ಬಿಡುಗಡೆ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಂಗ್, ಭಾರತ ಪಾಕಿಸ್ತಾನದೊಂದಿಗೆ ಮಾತುಕತೆಗೆ ಸಿದ್ಧವಿದೆ. ಆದರೆ ಮುಂಬೈ ದಾಳಿಯ ಉಗ್ರನನ್ನು ಜೈಲಿನಿಂದ ಬಿಡುಗಡೆ ಮಾಡಿರುವುದು ದುರದೃಷ್ಟಕರ ಮತ್ತು ಇದೊಂದು ನಿರಾಶೆದಾಯಕ ಬೆಳವಣಿಗೆ ಎಂದಿದ್ದಾರೆ.

ಲಖ್ವಿಯನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ನಿನ್ನೆ ಲಾಹೋರ್ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಇಂದು ರಾವಲ್ಪಿಂಡಿ ಜೈಲಿನಿಂದ ರಹಸ್ಯವಾಗಿ ಉಗ್ರನನ್ನು ಬಿಡುಗಡೆ ಮಾಡಲಾಗಿದೆ.

ಲಾಹೋರ್ ಕೋರ್ಟ್ ಲಖ್ವಿ ಬಿಡುಗಡೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯಿಸಿದ್ದ ಭಾರತ, ಮುಂಬೈ ದಾಳಿಯ ರೂವಾರಿ ಜೈಲಿನಿಂದ ಹೊರ ಬರದಂತೆ ನೋಡಿಕೊಳ್ಳಲು ಬೇಕಾದ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಳ್ಳಬೇಕು ಮತ್ತು ಈ ಕುರಿತು ಭಾರತಕ್ಕೆ ಖಚಿತಪಡಿಸಬೇಕು ಎಂದು ಒತ್ತಾಯಿಸಿತ್ತು.

SCROLL FOR NEXT