ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿಗೆ 7 ಪೊಲೀಸರು ಬಲಿ

ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ಪೆದ್ಮಾಲ್ ಅರಣ್ಯ ಪ್ರದೇಶದಲ್ಲಿ ಶನಿವಾರ ನಕ್ಸಲರು ಎಸ್‌ಟಿಎಫ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 7...

ರಾಯ್‌ಪುರ: ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ಪೆದ್ಮಾಲ್ ಅರಣ್ಯ ಪ್ರದೇಶದಲ್ಲಿ ಶನಿವಾರ ನಕ್ಸಲರು ಎಸ್‌ಟಿಎಫ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 7 ಪೊಲೀಸರು ಮೃತಪಟ್ಟಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.

ಪೆದ್ಮಾಲ್ ಮತ್ತು ಪೊಲಂಪಲ್ಲಿ ಗ್ರಾಮಗಳ ನಡುವೆ ನಕ್ಸಲರು ಎಸ್‌ಟಿಎಫ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ.ವಿಜಿ ಅವರು ತಿಳಿಸಿದ್ದಾರೆ.

ದಾಳಿಯಲ್ಲಿ ಮೃತಪಟ್ಟವರನ್ನು ಪ್ಲಾಟೂನ್ ಕಮಾಂಡರ್ ಶಂಕರ್ ರಾವ್, ಮುಖ್ಯ ಪೇದೆಗಳಾದ ರೊಹಿತ್ ಸೊಧಿ ಮನೋಜ್ ಬಘೇಲ್ ಹಾಗೂ ಪೇದೆಗಳಾದ ಮೋಹನ್ ವಿ.ಕೆ., ರಾಜಕುಮಾರ್ ಮಿರ್ಕುಮ್, ಕಿರಣ್ ದೇಶ್ಮುಖ್ ಮತ್ತು ರಾಜ್‌ಮನ್ ತೆಕಮ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಜಗದಲ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ