ಇಂದು ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಪುಣ್ಯತಿಥಿ (ಸಂಗ್ರಹ ಚಿತ್ರ) 
ದೇಶ

ಇಂದು ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಪುಣ್ಯತಿಥಿ

ಕನ್ನಡದ ವರನಟ ಪದ್ಮಭೂಷಣ ಡಾ. ರಾಜ್ ಕುಮಾರ್‌ ಇಂದಿಗೆ ನಮ್ಮನ್ನಗಲಿ ಒಂಬತ್ತು ವರ್ಷಗಳಾಗಿವೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಕುಮಾರ್‌ ಸ್ಮಾರಕಕ್ಕೆ ಈಗಾಗಲೇ ಭೇಟಿ ನೀಡಿರುವ ರಾಜ್ ಕುಟುಂಬ ಹಾಗೂ ರಾಜ್ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ...

ಬೆಂಗಳೂರು: ಕನ್ನಡದ ವರನಟ  ಪದ್ಮಭೂಷಣ ಡಾ. ರಾಜ್ ಕುಮಾರ್‌ ಇಂದಿಗೆ ನಮ್ಮನ್ನಗಲಿ ಒಂಬತ್ತು ವರ್ಷಗಳಾಗಿವೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಕುಮಾರ್‌ ಸ್ಮಾರಕಕ್ಕೆ ಈಗಾಗಲೇ ಭೇಟಿ ನೀಡಿರುವ ರಾಜ್ ಕುಟುಂಬ ಹಾಗೂ ರಾಜ್ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಾವಿರಾರು ಜನ ಡಾ. ರಾಜ್‌ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತಿದ್ದು, ಸಮಾಧಿ ದರ್ಶನದ ನಂತರ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅನ್ನದಾನವನ್ನು ರಾಜ್ ಅವರ ಹೆಸರಿನಲ್ಲಿ ಆಯೋಜಿಸಲಾಗಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜ, ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್, ನಿರ್ದೇಶಕ ದೊರೆಭಗವಾನ್ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಹಿರಿಯ ನಟ ಶಿವರಾಂ, ಮುಂತಾದ ನಟ-ನಟಿಯರು ಹಾಗೂ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿ ನೆರೆದಿದ್ದು, ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!