ನೇತಾಜಿ ಸಭಾಷ್‌ಚಂದ್ರ ಬೋಸ್ 
ದೇಶ

ಮೋದಿ ಸರ್ಕಾರದಿಂದ ನೇತಾಜಿ ರಹಸ್ಯ ಕಡತಗಳ ಬಹಿರಂಗ, ಸಮಿತಿ ರಚನೆ

ನೇತಾಜಿ ಸಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳ ಬಹಿರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಉನ್ನತ...

ನವದೆಹಲಿ: ನೇತಾಜಿ ಸಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳ ಬಹಿರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಬುಧವಾರ ವರದಿಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ಬರ್ಲಿನ್‌ನಲ್ಲಿ ಬೋಸ್ ಸಂಬಂಧ ಸೂರ್ಯ ಕುಮಾರ್ ಬೋಸ್ ಅವರಿಗೆ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದ ಮಾರನೇ ದಿನವೇ ಕೇಂದ್ರ ಸರ್ಕಾರ ಈ ಸಂಬಂಧ ಸಂಪುಟ ಕಾರ್ಯದರ್ಶಿ ನೇತೃತ್ವದ ಆಂತರಿಕ ಸಚಿವರ ಸಮಿತಿ ರಚಿಸಿದೆ.

ವರದಿಗಳ ಪ್ರಕಾರ, ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ, ಗುಪ್ತಚರ ಇಲಾಖೆ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಸಹ ಈ ಸಮಿತಿಯಲ್ಲಿರಲಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಾವಿನ ಕುರಿತ ಎಲ್ಲಾ ರಹಸ್ಯ ಕಡತಗಳನ್ನು ಸಮಿತಿ ಅಧ್ಯಯನ ಮಾಡಲಿದೆ. ಬಳಿಕ ಆ ದಾಖಲೆಗಳನ್ನು ಬಹಿರಂಗಪಡಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ.

ಈ ಮಧ್ಯೆ, ವಿದೇಶಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುವಂತಹ ಕಡತಗಳನ್ನು ಬಹಿರಂಗಪಡಿಸದಂತೆ ಸಮಿತಿ ಸರ್ಕಾರಕ್ಕೆ ಸಲಹೆ ನೀಡಲಿದೆ.

ಬೋಸ್ ಕುಟುಂಬದ ವಿರುದ್ಧ ನೆಹರೂ ಸರ್ಕಾರ ಎರಡು ದಶಕಗಳ ಕಾಲ ನಡೆಸಿದ ಬೇಹುಗಾರಿಕೆ ವಿಚಾರ ಸೋರಿಕೆಯಾಗುತ್ತಿದ್ದಂತೆ ನೇತಾಜಿ ಸಾವಿನ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿತ್ತು. ನಿನ್ನೆ ನೇತಾಜಿ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿ ಕೋಲ್ಕತಾದಲ್ಲಿ ಬೋಸ್ ಕುಟುಂಬದ ಸದಸ್ಯರು ಹಾಗೂ ಬೆಂಬಲಿಗರು ರ್ಯಾಲಿ ಸಹ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT