ಜಮ್ಮು-ಕಾಶ್ಮೀರ: ನಿನ್ನೆ ಪಾಕಿಸ್ತಾನದ ಪರ ಘೋಷಣೆಗಳು ಕೂಗತ್ತಾ ರ್ಯಾಲಿ ನಡೆಸಿದ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮಕ್ಕೆ ಪ್ರತಿಕ್ರಯಿಸಿದ ಜಮ್ಮ ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್, ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಗುರುವಾರ ಹೇಳಿದ್ದಾರೆ.
ನಿನ್ನೆ ಭಾರತದಲ್ಲಿ ಪಾಕ್ ಬಾವುಟ ಹಾರಿಸಿ ಉದ್ಧಟತನ ಮೆರೆದ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಯಿಸಿರುವ ಮುಫ್ತಿ, ಕಾನೂನು ತನ್ನ ಕೆಲಸ ಮಾಡಲಿದೆ. ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ನಿನ್ನೆ ರಾತ್ರಿ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ, ಮಸರತ್ ಅಲಂ ಸೇರಿದಂತೆ ರ್ಯಾಲಿಯಲ್ಲಿ ಭಾಗಿಯಾಗಿದ್ದ ಕೆಲ ಪ್ರತ್ಯೇಕತಾವಾದಿಗಳ ವಿರದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.