ಸಾಂದರ್ಭಿಕ ಚಿತ್ರ 
ದೇಶ

ಪಾಕ್ ನ ಐಸ್ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಾವು

ಪಾಕಿಸ್ತಾನದ ಇಸ್ಲಾಮಿಕ್ ಸ್ಟೇಟ್ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯ್ಯದ್ ಬಾಂಬ್ ಸ್ಫೋಟದಿಂದಾಗಿ ಸಾವನ್ನಪ್ಪಿದ್ದಾನೆ ಎಂದು ಮಾದ್ಯಮಗಳು...

ಪೇಶಾವರ: ಪಾಕಿಸ್ತಾನದ ಇಸ್ಲಾಮಿಕ್ ಸ್ಟೇಟ್ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯ್ಯದ್ ಬಾಂಬ್ ಸ್ಫೋಟದಿಂದಾಗಿ ಸಾವನ್ನಪ್ಪಿದ್ದಾನೆ ಎಂದು ಮಾದ್ಯಮಗಳು ವರದಿ ಮಾಡಿವೆ.

ರಸ್ತೆ ಬದಿಯಲ್ಲಿ ಬಾಂಬ್ ಇಡುವ ವೇಳೆ, ಆಕಸ್ಮಿಕವಾಗಿ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಈಶಾನ್ಯದ ಭಾಗದಲ್ಲಿರುವ ಬುಡಕಟ್ಟು ಜನಾಂಗ ವಲಯದಲ್ಲಿ ಬಾಂಬ್ ಸ್ಫೋಟಿಸಲು ಮುಂದಾದ ಹಫೀಜ್, ರಸ್ತೆ ಬದಿಯಲ್ಲಿ ತನ್ನ ಇಬ್ಬರು ಸಹಚರರೊಂದಿಗೆ ಬಾಂಬ್ ಇಡುತ್ತಿದ್ದ ವೇಳೆ, ಬಾಂಬ್ ಸ್ಫೋಟಗೊಂಡಿದೆ.

ಖೈಬರ್ ಬುಡಕಟ್ಟು ವಲಯದಲ್ಲಿರುವ ತಿರ್ಹಾ ಕಣಿವೆಯ ತೂರ್ ದರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಂಬ್ ಸ್ಫೋಟದಿಂದಾಗಿ ಮೃತಪಟ್ಟಿರುವ ವ್ಯಕ್ತಿ ಐಸ್ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯ್ಯದ್ ಎಂದು ಭದ್ರತಾ ಸಿಬ್ಬಂದಿಗಳು ಹೇಳಿದ್ದಾರೆ. ಆದರೆ, ಈ ಬಗ್ಗೆ ಇಸ್ಲಾಮಿಕ್ ಸ್ಟೇಟ್ ಯಾವುದೇ ಹೇಳಿಕೆ ನೀಡಿಲ್ಲ. ತಮ್ಮ ನಾಯಕ ಮೃತಪಟ್ಟಿದ್ದಾನೆ ಎಂದು ಎಲ್ಲೂ ಹೇಳಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್ ಜನರು ಅನಕ್ಷರಸ್ಥರು.. ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

48 ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

SCROLL FOR NEXT