ಶ್ರೀನಗರದಲ್ಲಿ ಪ್ರತ್ಯೇಕತವಾದಿಗಳಿಂದ ಗಲಭೆ, ಅಶ್ರುವಾಯು ಸಿಡಿಸಿದ ಪೊಲೀಸರು 
ದೇಶ

ಮಸರತ್ ಅಲಂ ಬಂಧನ ವಿರೋಧಿಸಿ ಜಮ್ಮು ಕಾಶ್ಮೀರದಲ್ಲಿ ಪ್ರತಿಭಟನೆ, ಹಿಂಸಾಚಾರ

ಪಾಕಿಸ್ತಾನದ ಬಾವುಟ ಹಾರಿಸಿದ ಪ್ರಕರಣಕ್ಕೆಸಂಬಂಧಿಸಿದಂತೆ ಪ್ರತ್ಯೇಕತಾವಾದಿ ಮಸರತ್ ಅಲಂ ಬಂಧನ ವಿರೋಧಿಸಿ ಪ್ರತ್ಯೇಕತಾವಾದಿಗಳು...

ಶ್ರೀನಗರ: ಪಾಕಿಸ್ತಾನದ ಬಾವುಟ ಹಾರಿಸಿದ ಪ್ರಕರಣಕ್ಕೆಸಂಬಂಧಿಸಿದಂತೆ ಪ್ರತ್ಯೇಕತಾವಾದಿ ಮಸರತ್ ಅಲಂ ಬಂಧನ ವಿರೋಧಿಸಿ ಜಮ್ಮ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಕೈಗೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಪ್ರತ್ಯೇಕತಾವಾದಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸರು ಸೇರಿದಂತೆ ಕನಿಷ್ಠ 14 ಜನರು ಗಾಯಗೊಂಡಿದ್ದಾರೆ.

ಟ್ರಾಲ್ ಪಟ್ಟಣದಲ್ಲಿ ಭಯೋತ್ಪಾದಕ ನಿಗ್ರಹ ದಳ ನಡೆಸಿದ ದಾಳಿಯಲ್ಲಿ ಇತ್ತೀಚೆಗೆ ದಕ್ಷಿಣ ಕಾಶ್ಮೀರದ ಯುವಕ ಹತ್ಯೆಗೀಡಾದ ಪ್ರಕರಣ ವಿರೋಧಿಸಿ ಪ್ರತ್ಯೇಕವಾದಿ ನಾಯಕ ಮಿರ್ವಾಜ್‌ ಉಮರ್ ಫಾರೂಕ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.

ಪ್ರತಿಭಟನಾಕಾರರು ಕಲ್ಲು ತೂರಾಟಕ್ಕೆ ಮುಂದಾದ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಗೆ ಮುಂದಾಗಿದ್ದಾರೆ. ಬಳಿಕ ಅಶ್ರುವಾಯು ಸಿಡಿಸಿ ಅವರನ್ನು ಚದುರಿಸಲು ಯತ್ನಿಸಿದರು.

ಪ್ರತ್ಯೇಕತಾವಾದಿ ನಾಯಕರಾದ ಸೈಯದ್ ಅಲಿ ಗಿಲಾನಿ ಹಾಗೂ ಮಸರತ್ ಅಲಂ ಅವರನ್ನು ಬಿಡುಗಡೆಗೊಳಿಸುವಂತೆ ಪ್ರತಿಭಟನಾಕಾರರು ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಅಲ್ಲದೇ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ