ರಾಹುಲ್ ಗಾಂಧಿ 
ದೇಶ

ನಾಳೆ ರಾಹುಲ್ ಗಾಂಧಿಯಿಂದ ರೈತ ಮುಖಂಡರ ಭೇಟಿ

ಅಜ್ಞಾತವಾಸದಿಂದ ವಾಪಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರನ್ನು ಭೇಟಿ ಮಾಡಿ,...

ನವದೆಹಲಿ: ಅಜ್ಞಾತವಾಸದಿಂದ ವಾಪಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರನ್ನು ಭೇಟಿ ಮಾಡಿ, ಭೂಸ್ವಾದೀನ ಮಸೂದೆ ಕುರಿತು ಚರ್ಚಿಸಲಿದ್ದಾರೆ.

ಎನ್‌ಡಿಎ ಸರ್ಕಾರದ ಭೂಸ್ವಾಧೀನ ಮಸೂದೆ ವಿರುದ್ಧ ಕಾಂಗ್ರೆಸ್ ಭಾನುವಾರ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಿದ್ದು, ಆ ರ್ಯಾಲಿಗೂ ಮುನ್ನಾ ದಿನವೇ ರಾಹುಲ್ ಗಾಂಧಿ ಅವರು ರೈತರ ನಿಯೋಗವನ್ನು ಭೇಟಿ ಮಾಡುತ್ತಿದ್ದಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ಪಂಜಾಬ ಮತ್ತು ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುವ ರೈತ ಸಂಘಗಳ ಮುಖಂಡರನ್ನು ರಾಹುಲ್ ಭೇಟಿ ಮಾಡುತ್ತಿದ್ದು, ಈ ವೇಳೆ ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.

ಏ.19ಕ್ಕೆ ನಡೆಯುವ ರೈತರ ಸಮಾವೇಶಕ್ಕೆ ದೇಶದ ವಿವಿಧ ಕಡೆಯಿಂದ ಲಕ್ಷಾಂತರ ರೈತರು ಆಗಮಿಸುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಸೇರಿದಂತೆ ಇತರ ನಾಯಕರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!