ಸೈಯದ್ ಅಲಿ ಶಾ ಗಿಲಾನಿ, ಮಸರತ್ ಆಲಮ್ 
ದೇಶ

ಗಿಲಾನಿ, ಆಲಂಗೆ ಗೃಹ ಬಂಧನ

ಟ್ರಾಲ್ ಪಟ್ಟಣದಲ್ಲಿ ನಡೆಸಲುದ್ದೇಶಿಸಿರುವ ರ್ಯಾಲಿಯನ್ನು ತಡೆಯಲು ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಸೈಯದ್ ಅಲಿ ಶಾ ಗಿಲಾನಿ...

ಶ್ರೀನಗರ: ಟ್ರಾಲ್ ಪಟ್ಟಣದಲ್ಲಿ ನಡೆಸಲುದ್ದೇಶಿಸಿರುವ ರ್ಯಾಲಿಯನ್ನು ತಡೆಯಲು ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಸೈಯದ್ ಅಲಿ ಶಾ ಗಿಲಾನಿ ಮತ್ತು ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಮ್ ಇಬ್ಬರನ್ನೂ ಗೃಹಬಂಧನದಲ್ಲಿ ಇಡಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಗಿಲಾನಿಯ ಹೈದರ್ ಪೋರ ಮನೆಯ ಸುತ್ತ ಕಣ್ಗಾವಲನ್ನೂ ಇಡಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಭಯೋತ್ಪಾದಕ ನಿಗ್ರಹ ದಳ ನಡೆಸಿದ ದಾಳಿಯಲ್ಲಿ ದಕ್ಷಿಣ ಕಾಶ್ಮೀರದ ಇಬ್ಬರು ಯುವಕರು ಹತ್ಯೆಗೀಡಾದ ಹಿನ್ನೆಲೆಯಲ್ಲಿ ಗಿಲಾನಿ ಟ್ರಾಲ್ ಪಟ್ಟಣದಲ್ಲಿ ಶುಕ್ರವಾರ ರ್ಯಾಲಿ ನಡೆಸುವ ಸಿದ್ಥತೆ ನಡೆಸಿದ್ದರು. ಇನ್ನೊಂದೆಡೆ ಪ್ರತ್ಯೇಕತಾವಾದಿ ಮಸರತ್ ನಿನ್ನೆ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನ ಬಾವುಟ ಹಾರಾಟ ಮಾಡಿದ್ದಲ್ಲದೆ ದೇಶವಿರೋಧಿ ಘೋಷಣೆಗಳನ್ನೂ ಕೂಗಿದ್ದರು.

ಕಾನೂನು ಬಾಹಿರ ಚಟುವಟಿಕೆ(ನಿಗ್ರಹ) ಕಾಯ್ದೆಯಡಿ ಮಸರತ್ ಆಲಂ ಹಾಗೂ ಗಿಲಾನಿಯವರನ್ನು ಗೃಹಬಂಧನದಲ್ಲಿಟ್ಟಿರುವುದಾಗಿ ಇಲಾಖೆ ತಿಳಿಸಿದೆ. ಪಾಕಿಸ್ತಾನ ಬಾವುಟ ಪ್ರದರ್ಶನಕ್ಕೆ ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ತೀವ್ರ ಟೀಕೆ ವ್ಯಕ್ತ ವಾಗಿತ್ತು. ಕೇಂದ್ರ ಗಹ ಸಚಿವಾಲಯ ಕೂಡ ಪ್ರತ್ಯೇಕವಾದಿಗಳ ಇಂಥ ದುರ್ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯಸರ್ಕಾರಕ್ಕೆ ಸೂಚಿಸಿತ್ತು.

ಪಾಕ್ ಬೆಂಬಲ: ಕಾಶ್ಮೀರದ ಬೀದಿಗಳಲ್ಲಿ ಪಾಕ್ ಧ್ವಜ ಹಾರಿಸಿದ್ದಕ್ಕೆ ಪಾಕಿಸ್ತಾನ ಬೆಂಬಲ ವ್ಯಕ್ತಪಡಿಸಿದೆ. ಈ ರೀತಿ ಮಾಡಿದ್ದರಲ್ಲಿ ತಪ್ಪೇನಿಲ್ಲ. ಇದು ಕಾಶ್ಮೀರಿಗಳು ನಮ್ಮ ಜತೆಗೆ ಹೊಂದಿರುವ ಭಾವನಾತ್ಮಕ ಸಂಬಂಧವನ್ನು ತೋರಿಸುತ್ತದೆ ಎಂದು ಪಾಕ್‍ನ ವಿದೇಶಾಂಗ ಇಲಾಖೆ ವಕ್ತಾರ ತಸ್ಮಿನ್ ಅಸ್ಲಾಂ ಹೇಳಿದ್ದಾರೆ. ಪ್ರತ್ಯೇಕವಾದಿಗಳ ವಿರುದ್ಧ ವಕೀಲರು ಶುಕ್ರವಾರ ಜಮ್ಮು ಬಂದ್‍ಗೆ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT