ಜಲಾಲಾಬಾದ್: ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಸುಮಾರು 33 ಜನರು ಸಾವನ್ನಪ್ಪಿರುವ ಘಟನೆ ಪೂರ್ವ ಆಫ್ಘಾನಿಸ್ಥಾನದ ಜಲಾಲಾಬಾದ್ ಪ್ರಾಂತ್ಯದಲ್ಲಿ ನಡೆದಿದೆ.
ಜಲಾಲಾಬಾದ್ ಪ್ರಾಂತ್ಯದಲ್ಲಿರುವ ಬ್ಯಾಂಕ್ ಒಂದರ ಆವರಣದಲ್ಲಿ ಆತ್ಮಾಹುತಿ ಬಾಂಬರ್ ನಡೆಸಿದ ಸ್ಫೋಟದಲ್ಲಿ ಸುಮಾರು 33ಕ್ಕೂ ಹೆಚ್ಚು ಜನ ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಮಾರು 15 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಂಕ್‌ನಲ್ಲಿ ಸರ್ಕಾರಿ ನೌಕರರು ಅವರ ವೇತನ ಗಳನ್ನ ಪಡೆದುಕೊಳ್ಳುತ್ತಿದ್ದ ವೇಳೆ ಈ ಸ್ಫೋಟ ನಡೆಸಲಾಗಿದೆ. ನೂರಾರು ಜನ ಸರ್ಕಾರಿ ಉದ್ಯೋಗಿಗಳು ಬ್ಯಾಂಕ್ ಒಳಗೆ ಹೊರಗೆ ಇದ್ದರು ಎಂದು ಮೂಲಗಳು ತಿಳಿಸಿವೆ.