ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಉಡುಗೊರೆ ಕೊಡಲು ಸರ್ಕಾರದ ಅನುಮತಿ ಕಡ್ಡಾಯ!

ಇನ್ನು ಮುಂದೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ರು.5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಉಡುಗೊರೆ ತೆಗೆದುಕೊಳ್ಳುವ ಮೊದಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ!...

5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಉಡುಗೊರೆ ಕೊಡಲು ಸರ್ಕಾರದ ಅನುಮತಿ ಕಡ್ಡಾಯ!
Updated On : 20 Apr 2015, 10:14 am

ನವದೆಹಲಿ: ಇನ್ನು ಮುಂದೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ರು.5 ಸಾವಿರಕ್ಕೂ ಹೆಚ್ಚಿನ ಮೌಲ್ಯದ ಉಡುಗೊರೆ ತೆಗೆದುಕೊಳ್ಳುವ ಮೊದಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ!

ಈ ಹಿಂದೆ ಅಧಿಕಾರಿಗಳು ರು.1 ಸಾವಿರಕ್ಕಿಂತ ಹೆಚ್ಚಿನ ಮೌಲ್ಯದ ಉಡುಗೊರೆಗೆ ಸರ್ಕಾರದ ಪೂರ್ವಾನುಮತಿ ಪಡೆಯಬೇಕಿತ್ತು. ಆದರೆ, ಆಲ್ ಇಂಡಿಯಾ ಸರ್ವೀಸಸ್ ರೂಲ್ಸ್ ಗೆ ಇತ್ತೀಚೆಗೆ ಮಾಡಿದ ತಿದ್ದುಪಡಿಯನ್ವಯ ಉಡುಗೊರೆ ಮೌಲ್ಯವನ್ನು ಹೆಚ್ಚಿಸಲಾಗಿದೆ.

ಈ ಹಿಂದೆ ಹತ್ತಿರದ ಸಂಬಂಧಿಗಳು ಅಥವಾ ಗೆಳೆಯರಿಂದ ರು.5 ಸಾವಿರಕ್ಕಿಂತ ಕಡಿಮೆ ಮೌಲ್ಯದ ಉಡುಗೊರೆಗಳನ್ನು ತೆಗೆದುಕೊಂಡರೆ ಸರ್ಕಾರಕ್ಕೆ ಮಾಹಿತಿ ನೀಡಬೇಕಿರಲಿಲ್ಲ. ಆದರೆ ಹೊಸ ನಿಯಯಾವಳಿ ಪ್ರಕಾರ, ಸದಸ್ಯರು ತಮ್ಮ ಹತ್ತಿರದ ಸಂಬಂಧಿಕರು ಅಥವಾ ವೈಯಕ್ತಿಕ ಗೆಳೆಯರಿಂದ ಮದುವೆ, ವಾರ್ಷಿಕೋತ್ಸವ, ಧಾರ್ಮಿಕ ಕಾರ್ಯಕ್ರಮಗಳ ವೇಳೆ ಪಡೆಯುವ ಉಡುಗೊರೆಗಳ ಮೌಲ್ಯ ರು. 25 ಸಾವಿರಕ್ಕಿಂತ ಕಡಿಮೆ ಇದ್ದರೆ ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments