ಸುಭಾಷ್‌ಚಂದ್ರ ಬೋಸ್ 
ದೇಶ

ಬೋಸ್ ಕುಟುಂಬಕ್ಕೆ ಪ್ರಧಾನಿ ಆಹ್ವಾನ, ಮೇ 17ಕ್ಕೆ ನೇತಾಜಿ ಸಾವಿನ ರಹಸ್ಯ ಬಹಿರಂಗ ಸಾಧ್ಯತೆ

ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ....

ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಸಾವಿನ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಕುಟುಂಬದ 10 ಸದಸ್ಯರಿಗೆ ದೆಹಲಿ ಭೇಟಿಗೆ ಆಹ್ವಾನ ನೀಡಿದ್ದಾರೆ ಎಂದು ಸೋಮವಾರ ವರದಿಗಳು ತಿಳಿಸಿವೆ.

ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಬೋಸ್ ಕುಟುಂಬದ ಎಲ್ಲಾ ಸದಸ್ಯರನ್ನು ಭೇಟಿ ಮಾಡಲು ಬಯಸಿದ್ದು, ಮೇ 17ಕ್ಕೆ ದೆಹಲಿಗೆ ಬರುವಂತೆ ಆಹ್ವಾನ ಪತ್ರಿಕೆ ಕಳುಹಿಸಿದ್ದಾರೆ.

ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಕುರಿತು ಕುಟುಂಬದೊಂದಿಗೆ ಚರ್ಚಿಸಿ, ಬಳಿಕ ಬಹಿರಂಗಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗಷ್ಟೆ ಬರ್ಲಿನ್‌ನಲ್ಲಿ ಬೋಸ್ ಸಂಬಂಧ ಸೂರ್ಯ ಕುಮಾರ್ ಬೋಸ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ಕುರಿತು ಪರಿಶೀಲಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದರು.

ಬೋಸ್ ಕುಟುಂಬದ ವಿರುದ್ಧ ನೆಹರೂ ಸರ್ಕಾರ ಎರಡು ದಶಕಗಳ ಕಾಲ ನಡೆಸಿದ ಬೇಹುಗಾರಿಕೆ ವಿಚಾರ ಸೋರಿಕೆಯಾಗುತ್ತಿದ್ದಂತೆ ನೇತಾಜಿ ಸಾವಿನ ಕುರಿತ ರಹಸ್ಯ ದಾಖಲೆಗಳನ್ನು ಬಹಿರಂಗ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT