ಸಲ್ಮಾನ್ ಖಾನ್ 
ದೇಶ

ಗುದ್ದೋಡು ಪ್ರಕರಣ: ಮೇ 6ರಂದು ಸಲ್ಮಾನ್ ಖಾನ್ ಭವಿಷ್ಯ ನಿರ್ಧಾರ

2002ರ ಗುದ್ದೋಡು ಪ್ರಕರಣದ ವಾದಗಳು ಮತ್ತು ವಿಚಾರಣೆ ಮುಕ್ತಾಯಗೊಂಡಿದ್ದು, ಮೇ 6ಕ್ಕೆ ತೀರ್ಪು ಪ್ರಕಟಿಸುವುದಾಗಿ ಮುಂಬೈ ಸೆಷನ್ಸ್ ಕೋರ್ಟ್ ಮಂಗಳವಾರ ಹೇಳಿದೆ.

ಮುಂಬಯಿ: 2002ರ ಗುದ್ದೋಡು ಪ್ರಕರಣದ ವಾದಗಳು ಮತ್ತು ವಿಚಾರಣೆ ಮುಕ್ತಾಯಗೊಂಡಿದ್ದು, ಮೇ 6ಕ್ಕೆ ತೀರ್ಪು ಪ್ರಕಟಿಸುವುದಾಗಿ ಮುಂಬೈ ಸೆಷನ್ಸ್ ಕೋರ್ಟ್ ಮಂಗಳವಾರ ಹೇಳಿದೆ.

ಕಳೆದ 13 ವರ್ಷಗಳಿಂದ ವಿಚಾರಣೆ ನಡೆಸುತ್ತಿದ್ದ ಕೋರ್ಟ್ ಅಂತಿಮ ತೀರ್ಪಿನ ದಿನಾಂಕವನ್ನು ಮಂಗಳವಾರ ಪ್ರಕಟಿಸುವುದಾಗಿ ನಿನ್ನೆ ಹೇಳಿತ್ತು. ಅದರಂತೆ ಇಂದು ದಿನಾಂಕವನ್ನು ಪ್ರಕಟಿಸಿರುವ ಕೋರ್ಟ್ ಪ್ರಕರಣ ಸಂಬಂಧ ತೀರ್ಪುನ್ನು ಮೇ 6ಕ್ಕೆ ಪ್ರಕಟಿಸಲಿದೆ.

ವಾದ ವಿವಾದ
ಪ್ರಕರಣದ ಪ್ರತ್ಯಕ್ಷದರ್ಶಿ ರವೀಂದ್ರ ಪಾಟೀಲ್‌ರ ಸಾಕ್ಷ್ಯವನ್ನು ಒಪ್ಪಲಾಗದು. ಆತ ಮೃತಪಟ್ಟಿದ್ದು, ಮರು ವಿಚಾರಣೆಗೆ ಲಭ್ಯವಿಲ್ಲ,'' ಎಂದು ಸಲ್ಮಾನ್ ಪರ ವಕೀಲರು ವಾದಿಸಿದ್ದರು.

ಮುಂಬೈ ಕೋರ್ಟ್‌ನಲ್ಲಿ ಇತ್ತೀಚೆಗೆ ನಡೆದಿದ್ದ ಅಂತಿಮ ಹಂತದ ವಿಚಾರಣೆ ವೇಳೆ, ತಮ್ಮ ವಾದಕ್ಕೆ ಇನ್ನಷ್ಟು ಸಮಯಾವಕಾಶವನ್ನು ಸಲ್ಮಾನ್ ಪರ ವಕೀಲರು ಕೋರಿದ್ದರು. ಇದಕ್ಕೆ ಒಪ್ಪದ ಸೆಷನ್ಸ್ ನ್ಯಾಯಾಧೀಶರು, ''ನಿಮ್ಮ ವಾದವನ್ನು ಏ. 20ರಂದು ಮುಕ್ತಾಯಗೊಳಿಸಬೇಕು ಎಂದು ಸೂಚಿಸಿದ್ದರು.

ಸಲ್ಮಾನ್ ಖಾನ್ ಚಾಲಕ ಅಶೋಕ್ ಸಿಂಗ್ ಸೇರಿದಂತೆ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ, ಘಟನೆ ನಡೆದ ಸಮಯದಲ್ಲಿ ಕಾರು ಚಾಲನೆ ಮಾಡುತ್ತಿದ್ದುದು ತಾನೇ ಎಂದು ಚಾಲಕ ಅಶೋಕ್ ಸಿಂಗ್ ಒಪ್ಪಿಕೊಂಡಿದ್ದಾನೆ.

2002ರ ಸೆಪ್ಟೆಂಬರ್ 28ರಂದು ಸಲ್ಮಾನ್ ಖಾನ್ ಅವರಿದ್ದ ಟೊಯೋಟಾ ಲ್ಯಾಂಡ್ ಕ್ರೂಸರ್ ಕಾರು ವಾಣಿಜ್ಯನಗರಿ ಮುಂಬಯಿಯ ಬಾಂದ್ರಾ ಬಳಿಯ ಬೇಕರಿಗೆ ನುಗ್ಗಿದ್ದರಿಂದ ಒಬ್ಬ ಮೃತ ಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT