ಸಿಲಿಂಡರ್ ಸ್ಫೋಟದಿಂದ ಮೂರಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು
ಸಿಲಿಂಡರ್ ಸ್ಫೋಟಗೊಂಡು ಮೂರಂತಸ್ತಿನ ಕಟ್ಟಡ ಕುಸಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬುಧವಾರ ದೆಹಲಿಯ ಮೋತಿನಗರದ...
ನವದೆಹಲಿ: ಸಿಲಿಂಡರ್ ಸ್ಫೋಟಗೊಂಡು ಮೂರಂತಸ್ತಿನ ಕಟ್ಟಡ ಕುಸಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬುಧವಾರ ದೆಹಲಿಯ ಮೋತಿನಗರದ ಸುದರ್ಶನ್ ಪಾರ್ಕ್ ಬಳಿ ನಡೆದಿದೆ.
ಇಂದು ಬೆಳಿಗ್ಗೆ 7.45 ಸುಮಾರಿನಲ್ಲಿ ಎಲ್ ಪಿಜಿ ಗ್ಯಾಸ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವಶೇಷಗಳಡಿ ಇನ್ನೂ ಹಲವರು ಸಿಕ್ಕಿಬಿದ್ದಿದ್ದಾರೆಂದು ಶಂಕಿಸಲಾಗಿದೆ. 7 ಅಗ್ನಿಶಾಮಕವಾಹನಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.