ಅರವಿಂದ್ ಕೇಜ್ರಿವಾಲ್ 
ದೇಶ

ರೈತ ಆತ್ಮಹತ್ಯೆ ವೇಳೆ ಭಾಷಣ, ಜನತೆಯ ಕ್ಷಮೆಯಾಚಿಸಿದ ದೆಹಲಿ ಸಿಎಂ

ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿಯ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಜೀವನದ ಅತ್ಯಂತ ನೋವಿನ ಕ್ಷಣ ಎಂದಿರುವ ದೆಹಲಿ....

ನವದೆಹಲಿ: ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿಯ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಜೀವನದ ಅತ್ಯಂತ ನೋವಿನ ಕ್ಷಣ ಎಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರೈತ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ತಾವು ಭಾಷಣ ಮುಂದುವರಿಸಿದ್ದಕ್ಕಾಗಿ ಜನತೆಯ ಕ್ಷಮೆಯಾಚಿಸಿದ್ದಾರೆ.

ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಕುರಿತು ಇಂದು ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ರೈತನ ಆತ್ಮಹತ್ಯೆ ನನ್ನ ಜೀವನದ ಅತ್ಯಂತ ನೋವಿನ ಕ್ಷಣ. ರ್ಯಾಲಿಯಲ್ಲಿ ನಾನು ಭಾಷಣ ಮುಂದುವರೆಸಬಾರದಾಗಿತ್ತು. ಮತನಾಡಿದ್ದು ತಪ್ಪಾಗಿದೆ. ನನ್ನನ್ನು ಕ್ಷಮಿಸಿ ಎಂದು ಹೇಳಿದ್ದಾರೆ.

ನಾನು ಭಾಷಣ ಮಾಡುತ್ತಿದ್ದ ವೇದಿಕೆಯಿಂದ ರೈತ ಏರಿದ್ದ ಮರ ಸ್ವಲ್ಪ ದೂರದಲ್ಲಿತ್ತು. ಹೀಗಾಗಿ ಅಲ್ಲಿ ಏನು ನಡೆಯುತ್ತಿದೆ ಎಂದು ನನಗೆ ತಿಳಿಯಲಿಲ್ಲ. ಆದರೆ ದೆಹಲಿ ಪೊಲೀಸರು ಸಹ ಆ ಬಗ್ಗೆ ಯಾವುದೇ ಮಾಹಿತಿ ನೀಡದೇ ಸುಮ್ಮನಿದ್ದರು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಅಲ್ಲದೆ ಆರೋಪ ಪ್ರತ್ಯಾರೋಪ ಮಾಡುವ ಸಮಯ ಇದಲ್ಲ. ಹೀಗಾಗಿ ನಾನು ದೆಹಲಿ ಪೊಲೀಸರನ್ನು ದೂಷಿಸಲು ಬಯಸುವುದಿಲ್ಲ. ಅವರ ಕೆಲಸವನ್ನು ಅವರು ಮಾಡಿದ್ದಾರೆ ಎಂದಿದ್ದಾರೆ.

ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ನಾನು 1 ಗಂಟೆ ಮಾತನಾಡಬೇಕೆಂದಿದ್ದೆ. ಆದರೆ ಈ ಘಟನೆಯಿಂದಾಗಿ ಕೇವಲ 15 ನಿಮಿಷಗಳಿಗೆ ನನ್ನ ಭಾಷಣವನ್ನು ಮೊಟಕುಗೊಳಿಸಿದೆ ಎಂದು ದೆಹಲಿ ಸಿಎಂ ಹೇಳಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ಮಾಧ್ಯಮಗಳಲ್ಲಿ ತನಿಖೆಯ ಕುರಿತು ಚರ್ಚೆ ನಡೆಯುತ್ತಿದೆ. ಆದರೆ ರೈತನ ಸಾವಿನ ಕುರಿತು ಯಾರೂ ಚರ್ಚಿಸುತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT