ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ. ರವಿ ನಿಗೂಢ ಸಾವಿನ ತನಿಖೆ ಆರಂಭಿಸಿರುವ ಸಿಬಿಐ ಅಧಿಕಾರಿಗಳು ಶುಕ್ರವಾರ ಸಿಐಡಿ ಚೇರಿಗೆ ತೆರಳಿ ಪ್ರಕರಣದ ಬಗೆಗಿನ ಮಾಹಿತಿ ಸಂಗ್ರಹಿಸಿದ್ದಾರೆ.
ತನಿಖಾಧಿಕಾರಿ ಎಎಸ್ಪಿ ಕೃಷ್ಣಮೂರ್ತಿ ಅವರು ಶುಕ್ರವಾರ ಬೆಳಗ್ಗೆ ಸಿಐಡಿ ಕಚೇರಿಗೆ ತೆರಳಿ ಸಿಐಡಿ ಡಿಐಜಿ ಸೌಮೇಂದು ಮುಖರ್ಜಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ರವಿ ಸಾವಿನ ಬಗ್ಗೆ ಡೆಸಿದ ತನಿಖೆಗೆ ಬಂಧಿಸಿದ ವಿಧಿವಿಜ್ಞಾನ ಪ್ರಯೋಗಾಲಯ ವರದಿ, ಲ್ಯಾಪ್‍ಟಾಪ್, ಮೊಬೈಲ್ ಫೋನ್ ಗಳು, ಆದಾಯ ತೆರಿಗೆ ಇಲಾಖೆ ಕಚೇರಿ ಹಾಗೂ ಮನೆಯಿಂದ ವಶಪಡಿಸಿಕೊಂಡ ದಾಖಲೆಗಳು, ರವಿ ಕೋಲಾರ ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ನಡೆಸಿದ ಪ್ರಕರಣಗಳ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ವಿಧಾನಸೌಧಕ್ಕೆ ತೆರಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್‍ರನ್ನು ಭೇಟಿ ಮಾಡಿದ್ದ ಸಿಬಿಐ ಅಧಿಕಾರಿಗಳು ತನಿಖೆಗಾಗಿ ತಾತ್ಕಾಲಿಕ ಕಚೇರಿ ಕೇಳಿದ್ದಾರೆ. ಈ ವೇಳೆ ಸಿಐಡಿಯಲ್ಲೇ ಪ್ರತ್ಯೇಕ ಕಚೇರಿ ಮಾಡಿಕೊಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಆದರೆ, ಸಿಐಡಿಯಿಂದ ಮಾಹಿತಿ ಸೋರಿಕೆಯಾಗಬಹುದು ಎನ್ನುವ ಸಾಧ್ಯತೆ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರಿ ಸ್ವಾಮ್ಯದ, ಹೆಚ್ಚಿನ ಭದ್ರತೆ ಇರುವ ಕಚೇರಿಗಳಲ್ಲಿ ವ್ಯವಸ್ಥೆ ಮಾಡಿ ಕೊಡಿ ಎಂದು ಕೇಳಿದ್ದಾರೆಂದು ತಿಳಿದು ಬಂದಿದೆ.
ಎಂಜಿರಸ್ತೆಯಲ್ಲಿರುವಬಹುಮಹಡಿ ಕಟ್ಟಡದಲ್ಲೇ ಕಚೇರಿ ವ್ಯವಸ್ಥೆ ಮಾಡಿಕೊಡುವುದಾಗಿ ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸಿಬಿಐ ಅಧಿಕಾರಿಗಳಿಂದ ಯಾವುದೇ ಉತ್ತರ ಬಂದಿಲ್ಲ ಎನ್ನಲಾಗಿದೆ. ರಾಜ್ಯದಿಂದಲೂ ತನಿಖೆಗೆ ನೆರವು: ರಾಜ್ಯದಲ್ಲಿರುವ ಸಿಬಿಐ ಘಟಕ ಭ್ರಷ್ಟಾಚಾರ ಸಂಬಂಧಿಸಿದ ಪ್ರಕರಣಗಳನ್ನು ಮಾತ್ರ ನಿರ್ವಹಿಸುತ್ತದೆ.
ಐಪಿಸಿ ಕಲಂ ಅನ್ವಯ ದಾಖ ಲಾಗುವ, ಕೊಲೆ, ಅನುಮಾನಾಸ್ಪದ ಸಾವಿನ ಪ್ರಕರಣಗಳ ತನಿಖೆ ರಾಜ್ಯ ಸಿಬಿಐ ಘಟಕದ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ, ರಾಜ್ಯ ಸಿಬಿಐನ ಎಸ್ಪಿ ಸುಬ್ರಮಣ್ಯೇಶ್ವರ್ ರಾವ್ ಅವರು ತನಿಖೆಗೆ ನೆರವು ನೀಡುವುದಾಗಿ ತಿಳಿಸಿದ್ದಾರೆ.