ನವದೆಹಲಿ: ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ರಾಂಚಿ, ಜೈಪುರ, ಗುವಾಹಟಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದಾದ್ಯಂತ ಭೂಕಂಪನದ ಅನುಭವವಾಗಿರುವಂತೆ ತಿಳಿದುಬಂದಿದೆ.
ಇಂದು ಮಧ್ಯಾಹ್ನ 12.43 ರ ಸುಮಾರಿಗೆ ಭೂಮಿ ಕಂಪಿಸಿದ್ದು, ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.9 ರಷ್ಟು ದಾಖಲಾಗಿದೆ. ಭೂಮಿ ನಡುಗುತ್ತಿದ್ದಂತೆ ಕಚೇರಿ ಹಾಗೂ ಮನೆಯೊಳಗಿದ್ದ ಜನ ಹೊರ ಓಡಿ ಬಂದಿದ್ದು, ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ನೇಪಾಳದ ಕಠ್ಮಂಡುವಿನ 80 ಕಿ.ಲೋ ಮೀಟರ್ ದೂರದಲ್ಲಿರುವ ಕೊಡಾರಿ ಪ್ರದೇಶದ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ಭೂಮಟ್ಟದಿಂದ 10 ಕಿ.ಮೀ ಆಳದಲ್ಲಿ ಭೂಕಂಪಿಸಿದೆ ಎಂದು ತಿಳಿದುಬಂದಿದೆ.
ನೇಪಾಳದಲ್ಲೂ ಕಂಪಿಸಿದ ಭೂಮಿ
ಭೂಕಂಪದಿಂದ ಈಗಾಗಲೇ ತತ್ತರಿಸಿ ಹೋಗಿರುವ ನೇಪಾಳದಲ್ಲಿ ಇದೀಗ ಮತ್ತೆ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 7.2 ರಷ್ಟು ತೀವ್ರತೆ ದಾಖಲಾಗಿದೆ.