ನೆರೆಪೀಡಿತ ನೇಪಾಳಕ್ಕೆ ವಿಮಾನದ ಮೂಲಕ ಔಷಧಿ, ಆಹಾರ ಪೂರೈಕೆ
ಭೀಕರ ಭೂಕಂಪದಿಂದಾಗಿ ತತ್ತರಿಸಿರುವ ನೇಪಾಳಕ್ಕೆ ಭಾರತದಿಂದ ವಿಮಾನದ ಮೂಲಕ ಔಷಧಿ ಹಾಗೂ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ...
ಬೆಂಗಳೂರು: ಭೀಕರ ಭೂಕಂಪದಿಂದಾಗಿ ತತ್ತರಿಸಿರುವ ನೇಪಾಳಕ್ಕೆ ಭಾರತದಿಂದ ವಿಮಾನದ ಮೂಲಕ ಔಷಧಿ ಹಾಗೂ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆಗಾಗಿ ನೆರವು ನೀಡುವಂತೆ ನೇಪಾಳ ಸರ್ಕಾರದಿಂದ ಬಂದ ಮನವಿಗೆ ಸ್ಪಂದನೆ ನೀಡಿರುವ ಭಾರತ ಸರ್ಕಾರ 10 ಎನ್ ಡಿಆರ್ಎಫ್ ತಂಡಗಳ ಕಾರ್ಯಕರ್ತರನ್ನೊಳಗೊಂಡ ಭಾರತೀಯ ವಾಯುಪಡೆಯ 4 ವಿಮಾನಗಳನ್ನು ಕಠ್ಮಂಡುವಿಗೆ ಕಳುಹಿಸಿಕೊಟ್ಟಿದೆ.
ಇದೇ ವೇಳೆ ಭಾರತ ಹಾಗೂ ನೇಪಾಳದಲ್ಲಿ ಸಂಭವಿಸಿರುವ ಭೂಕಂಪದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತುರ್ತುಸಭೆ ಕರೆದಿದ್ದು, ನೇಪಾಳಕ್ಕೆ ಅಗತ್ಯ ನೆರವು ನೀಡುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.