ರಾಹುಲ್ ಗಾಂಧಿ 
ದೇಶ

ಶೀಘ್ರದಲ್ಲೇ ಮಹಾರಾಷ್ಟ್ರ, ತೆಲಂಗಾಣಕ್ಕೆ ರಾಹುಲ್ ಭೇಟಿ

ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ...

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರಂತೆ. ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವುದು ರಾಹುಲ್ ಭೇಟಿಯ ಉದ್ದೇಶ. ರಜಾ ಕಳೆದು ವಾಪಸ್  ಬಂದ ರಾಹುಲ್ ಸಂಸತ್ತಿನಲ್ಲಿ ಎರಡು ಬಾರಿ ಮಾತನಾಡುವ ಮೂಲಕ ಸಕ್ರಿಯವಾಗಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ರಾಹುಲ್ ಕೇದರನಾಥ ದೇವಾಲಯಕ್ಕೂ ಭೇಟಿ ನೀಡಿದ್ದರು. ಮಹಾರಾಷ್ಟ್ರ ಮತ್ತು ತೆಲಂಗಾಣ ಪ್ರವಾಸಕ್ಕಾಗಿ ರಾಹುಲ್ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ರಾಹುಲ್‌ನ ಈ ಭೇಟಿ ಒಂದೋ ಪಾದಯಾತ್ರೆ ಇಲ್ಲವೇ ಆತ್ಮಹತ್ಯೆಗೊಳಗಾದ ರೈತರ ಮನೆಗೆ ಭೇಟಿ ನೀಡುವುದಾಗಿರುತ್ತದೆ ಎಂದು ಬಲ್ಲಮೂಲಗಳು ಹೇಳಿವೆ.

ಏತನ್ಮಧ್ಯೆ, ಮುಂದಿನ ವಾರ ನಡೆಯಲಿರುವ ಸಂಸತ್ ಕಲಾಪದಲ್ಲಿ ರಾಹುಲ್ ಬೆಲೆ ಏರಿಕೆ ಬಗ್ಗೆ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!