ನವದೆಹಲಿ: ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ(ಎನ್ ಜೆಎಸಿ) ರಚನೆ ಸಂಬಂಧ ರಚಿಸಿರುವ ತ್ರಿಸದಸ್ಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್. ಎಲ್. ದತ್ತು ನಿರಾಕರಿಸಿದ್ದಾರೆ.
ಆಯೋಗದ ಬಗ್ಗೆ ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠ ಸ್ಪಷ್ಟ ನಿರ್ಧಾರ ಕೈಗೊಳ್ಳುವ ವರೆಗೆ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ ಅವರು. ಈ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಇದರ ಜತೆಗೆ ಆರು ಮಂದಿ ಸದಸ್ಯರ ಆಯೋಗದಲ್ಲಿ ಪಾಲ್ಗೊಳ್ಳಲೂ ನಿರಾಕರಿಸಿದ್ದಾರೆ. ಹೀಗಾಗಿ, ಹೈಕೋರ್ಟ್ ಮತ್ತು ಸುಪ್ರೀಂಕೋಟ್ರ್ ಗಳಲ್ಲಿ ನ್ಯಾಯಮೂರ್ತಿಗಳ ನೇಮಕ ಮಾಡುವ ಸಮಿತಿ ರದ್ದುಗೊಳಿಸಿ ಆಯೋಗ ವ್ಯವಸ್ಥೆ ಜಾರಿಗೊಳಿಸುವ ಕೇಂದ್ರದ ತೀರ್ಮಾನಕ್ಕೆ ಹಿನ್ನಡೆ ಆದಂತಾಗಿದೆ.
ಇದೇ ವೇಳೆ ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ನ್ಯಾ.ದತ್ತು ಅವರಪತ್ರದಿಂದಾಗಿ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ಸಂವಿಧಾನಿಕ ಪೀಠ ಸಭೆಯಲ್ಲಿ ಭಾಗವಹಿಸುವಂತೆ ಮುಖ್ಯ ನ್ಯಾಯಮೂರ್ತಿಗೆಸೂಚನೆ ನೀಡಬೇಕೆಂದು ರೋಹಟಗಿ ಮನವಿ ಮಾಡಿಕೊಂಡರು.