ರಾಹುಲ್ ಗಾಂಧಿ 
ದೇಶ

ಕಿಸಾನ್ ರ್ಯಾಲಿ ಬಳಿಕ ಈಗ ಪಾದಯಾತ್ರೆ

ದೆಹಲಿಯಲ್ಲಿ ಭೂ ಸ್ವಾಧೀನ ವಿಧೇಯಕ ವಿರುದ್ಧ ರೈತರ ರ್ಯಾಲಿ, ಸಂಸತ್ ನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ...

ನವದೆಹಲಿ: ದೆಹಲಿಯಲ್ಲಿ ಭೂ ಸ್ವಾಧೀನ ವಿಧೇಯಕ ವಿರುದ್ಧ ರೈತರ ರ್ಯಾಲಿ, ಸಂಸತ್ ನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಇದೀಗ ಮತ್ತೊಂದು ಶಕ್ತಿ ಪ್ರದರ್ಶನಕ್ಕೆಸಿದ್ಧರಾಗಿದ್ದಾರೆ.

ಇದೀಗ ಕಿಸಾನಡೆಸಲು ಮುಂದಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ಮಹಾರಾಷ್ಟ್ರದ ವಿದರ್ಭದಿಂದ ಅಥವಾ ತೆಲಂಗಾಣದ ಮೇದಕ್‍ನಿಂದ ಪಾದಯಾತ್ರೆ ಆರಂಭಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಮಹಾರಾಷ್ಟ್ರದ ವಿದರ್ಭದಿಂದಲೇ ಈ ಪಾದಯಾತ್ರೆ ಆರಂಭವಾಗುವುದು ಖಚಿತ. ಏಕೆಂದರೆ ಈ ಪ್ರದೇಶದಲ್ಲಿಯೇ ಹೆಚ್ಚಿನ ಪ್ರಮಾಣದ ರೈತರ ಆತ್ಮಹತ್ಯೆ ನಡೆದಿದೆ.

ಉತ್ತರಪ್ರದೇಶ, ಆಂಧ್ರಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಪಂಜಾಬ್ ಮತ್ತು ತೆಲಂಗಾಣ ರಾಜ್ಯಗಳ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕೃಷಿಕರ ಸಮಸ್ಯೆಗಳನ್ನು ಆಲಿಸಲು ರಾಹುಲ್ ನಿರ್ಧರಿಸಿದ್ದಾರೆ. ಮಂದಿನ ವರ್ಷ ಚುನಾವಣೆ ನಡೆಯಲಿರುವ ಬಿಹಾರಕ್ಕೂ ಭೇಟಿ ನೀಡಲು ನಿರ್ಧರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರೈತರ ಮನವೊಲಿಸಲು ಯತ್ನಿಸಲಿದ್ದಾರೆ. ಕೇಂದ್ರದ ಭೂಸ್ವಾಧೀನ ವಿಚಾರವನ್ನು ಉಪಯೋಗಿಸಿಕೊಂಡು ಕೃಷಿಕರ ಪರವಾಗಿ ರ್ಯಾಲಿಗಳನ್ನು ಮಾಡಿ ರಾಜಕೀಯ ಲಾಭ ಪಡೆಯಲು ಉದೇಶಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video