ಅವಶೇಷಗಳಡಿ ಸಿಲುಕಿದ್ದ 4 ತಿಂಗಳ ಮಗು 
ದೇಶ

ಸಾವನ್ನೇ ಗೆದ್ದ 4 ತಿಂಗಳ ಮಗು

ನಾಲ್ಕು ತಿಂಗಳ ಮಗುವೊಂದು ಪವಾಡ ಸದೃಶ ರೀತಿಯಲ್ಲಿ ಪಾರಾಗಿದೆ. ಘಟನೆ ನಡೆದು 22 ಗಂಟೆಗಳ ನಂತರ ಅವಶೇಷಗಳಡಿ ಸಿಲುಕಿದ್ದ ಮಗುವನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದೆ.

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ, ಬದುಕು ಕಳೆದು ಕೊಂಡಿದ್ದಾರೆ. ಇದರ ಜೊತೆಗೆ ಸಾವನ್ನು ಕೆಲವರು ಗೆದ್ದು ಬಂದಿದ್ದಾರೆ. ಇನ್ನೂ ರಕ್ಷಣಾ ಕಾರ್ಯ ಭರದಿಂದ ಸಾಗಿದೆ
ಇದರ ನಡುವೆಯೇ ನಾಲ್ಕು ತಿಂಗಳ ಮಗುವೊಂದು ಪವಾಡ ಸದೃಶ ರೀತಿಯಲ್ಲಿ ಜೀವಂತವಾಗಿ ಬದುಕುಳಿದಿದೆ. ಘಟನೆ ನಡೆದು 22 ಗಂಟೆಗಳ ನಂತರ ಅವಶೇಷಗಳಡಿ ಸಿಲುಕಿದ್ದ ಮಗುವನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದೆ.
ಕಠ್ಮಂಡುವಿನ ಭಕ್ತಪುರದಲ್ಲಿ ವಾಸವಿದ್ದ ದಂಪತಿ ಮಗುವನ್ನು ಕಳೆದುಕೊಂಡಿದ್ದರು. ಅವರಿಗೆ ತಮ್ಮ ಬದುಕಿದೆ ಎಂಬ ದೃಢವಾದ ನಂಬಿಕೆಯಿಂದ ಮಗುವನ್ನು ಹುಡುಕಿಕೊಡುವಂತೆ ರಕ್ಷಣಾ ಪಡೆ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ರಕ್ಷಣಾ ಸಿಬ್ಬಂದಿ ಮಗು ಸಾವನ್ನಪ್ಪಿರಬಹುದೆಂದು ಶಂಕಿಸಿದ್ದರು. ಅವಶೇಷಗಳಡಿಯಿಂದ ಮಗುವಿನ ಅಳು ಕೇಳಿಸಿಕೊಂಡ ತಂದೆ ಮಗು ಬದುಕಿದೆಯೆಂದು ಅದನ್ನು ರಕ್ಷಿಸಿಕೊಡಬೇಕೆಂದು ಮತ್ತೆ ಸೈನಿಕರ ಬಳಿ ಅಂಗಲಾಚಿದ. ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 4 ತಿಂಗಳ ಕಂದಮ್ಮನನ್ನು ರಕ್ಷಿಸಿದ್ದಾರೆ.
ಮಗುವನ್ನು ಹೊರತೆಗೆದು ಪರೀಕ್ಷಿಸಲಾಗಿದೆ. ಮಗು ಆರೋಗ್ಯವಾಗಿದ್ದು , ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!