ನಕ್ಸಲ್ ಕಾರ್ಯಾಚರಣೆ 
ದೇಶ

ಕೂಂಬಿಂಗ್ ಕಾರ್ಯಾಚರಣೆ: ನಕ್ಸಲ್ ಕಮಾಂಡರ್ ಹತ್ಯೆ, ಓರ್ವನ ಬಂಧನ

ನಕ್ಸಲ್ ಪೀಡಿತ ಛತ್ತೀಸ್ ಗಡದ ರಾಯ್ ಪುರದಲ್ಲಿ ಶುಕ್ರವಾರ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಕಮಾಂಡರ್ ನನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ...

ರಾಯ್ ಪುರ: ನಕ್ಸಲ್ ಪೀಡಿತ ಛತ್ತೀಸ್ ಗಡದ ರಾಯ್ ಪುರದಲ್ಲಿ ಶುಕ್ರವಾರ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಕಮಾಂಡರ್ ನನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಛತ್ತೀಸ್ ಗಡ ಕೊಂಡಗಾವ್ ಜಿಲ್ಲೆಯಲ್ಲಿ ನಕ್ಸಲರ ಅವಿತಿರುವಿಕೆ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕೂಡಲೇ ಕಾರ್ಯಪ್ರವೃತ್ತರಾದವು. ನಕ್ಸಲರು ಅವಿತಿದ್ದ ಘನೋರಾ ಅರಣ್ಯ ಪ್ರದೇಶವನ್ನು ಸುತ್ತುವರೆದ ಪೊಲೀಸರು ಮತ್ತು ಭದ್ರತಾ ಪಡೆಗಳು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಬರ್ದ ದಳಂನ ನಕ್ಸಲ್ ಕಮಾಂಡರ್ ಫೂಲ್ ಸಿಂಗ್ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾನೆ.

ಭದ್ರತಾ ಪಡೆಗಳು ಮತ್ತು ನಕ್ಸಲರ ಪರಸ್ಪರ ಗುಂಡಿನ ಕಾಳಗ ನಡೆಸುತ್ತಿದ್ದಂತೆಯೇ ಶಾಂತವಾಗಿದ್ದ ಅರಣ್ಯ ಪ್ರದೇಶ ಸತತ 2 ತಾಸುಗಳ ಕಾಲ ಯುದ್ಧಭೂಮಿಯಾಗಿ ಮಾರ್ಪಟ್ಟಿತ್ತು. ಭದ್ರತಾ ಪಡೆಗಳ ಸತತ ಗುಂಡಿನ ಸುರಿಮಳೆಗೆ ಬೆದರಿದ ನಕ್ಸಲರು ಅರಣ್ಯದತ್ತ ಓಡುತ್ತಿದ್ದರು. ಈ ವೇಳೆ ಓರ್ವ ಮಾವೋವಾದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.  ಬಂಧಿತ ಮಾವೋವಾದಿಯನ್ನು ರಾಕೇಶ್ ಎಂದು ಗುರುತಿಸಲಾಗಿದ್ದು, ಈತ ಅಂತಗಡ ದಳಂನ ಕಮಾಂಡರ್ ಆಗಿದ್ದ ಎಂದು ಹೇಳಲಾಗುತ್ತಿದೆ. ಇನ್ನು ಕೂಂಬಿಂಗ್ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಸಿದ್ದು, ಪರಾರಿಯಾಗಿರುವ ನಕ್ಸಲರಿಗಾಗಿ ಭದ್ರತಾ ಪಡೆಗಳು ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿವೆ.

ಘಟನಾ ಸ್ಥಳದಲ್ಲಿ 2 ಹ್ಯಾಂಡ್ ಗ್ರೆನೇಡ್, ನಕ್ಸಲ್ ಸಾಹಿತ್ಯಗಳು, ಕೆಲ ಡೈರಿ, ಔಷಧಿಗಳು ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇನ್ನು ಇಲ್ಲಿ ದೊರೆತಿರುವ ಡೈರಿಗಳಲ್ಲಿ ಮತ್ತು ಪುಸ್ತಕಗಳಲ್ಲಿ ನಕ್ಸಲ್ ಚಟುವಟಿಕೆಯ ಕುರಿತು ಮಹತ್ವದ ಮಾಹಿತಿಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. ನಕ್ಸಲರ ಉಪಾಯಗಳು, ಅವರ ಮುಂದಿನ ಗುರಿಗಳು ಮತ್ತು ಅವರ ಗುಂಪಿಗೆ ಸಂಬಂಧಿಸಿದ ಕೆಲ ಮಾಹಿತಗಳು ಅದರಲ್ಲಿವೆ ಎಂದು ಹೇಳಲಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!