ಅಂಡಮಾನ್ ದ್ವೀಪ ಸಮೂಹ 
ದೇಶ

ಅಂಡಮಾನ್ ದ್ವೀಪ ಸಮೂಹದಲ್ಲಿ ಭೂಕಂಪನ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಶುಕ್ರವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ.

ಅಂಡಮಾನ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಶುಕ್ರವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ.

ಅಂಡಮಾನ್ ದ್ವೀಪ ಸಮೂಹದ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದ್ದು, ಈ ವರೆಗೂ ಸಾವು-ನೋವಿನ ಕುರಿತು ವರದಿಗಳು ಬಂದಿಲ್ಲ. ಇನ್ನು ಭೂಕಂಪನ ಸಂಭವಿಸಿದ ಹಿನ್ನಲೆಯಲ್ಲಿ ಅಲ್ಲಿಯ ಸ್ಥಳೀಯ ಜನತೆ ಭಯಭೀತಿಗೊಂಡು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಇನ್ನು ವಿಜ್ಞಾನಿಗಳು ತಿಳಿಸಿರುವಂತೆ ಇದು ಸುನಾಮಿ ಸೃಷ್ಟಿಸುವಂತೆ ಪ್ರಬಲ ಕಂಪನವೇನು ಅಲ್ಲ. ಈ
ಕಂಪನದಿಂದ ಸುನಾಮಿ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೇಪಾಳದಲ್ಲಿ ಸಂಭವಿಸಿದ ಪ್ರಭಲ ಭೂಕಂಪನದಿಂದಾಗಿ ಈ ವರೆಗೂ ಸುಮಾರು 6.200 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಸಾಕಷ್ಟು ಮಂದಿ ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೇಪಾಳ ಭೂಕಂಪನದಿಂದಾಗಿ ಇಡೀ ವಿಶ್ವವೇ ತಲ್ಲಣಗೊಂಡಿದ್ದು, ಭೂಮಿ ಸಣ್ಣಗೆ ಕಂಪಿಸಿದರೂ ಅತೀವವಾಗಿ ಹೆದರುವಂತಹ ಪರಿಸ್ಥಿತಿ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT