ಕೋಲ್ಕತಾ: ಕೋಲ್ಕತಾದ ತಲ ಜೀಲ್ ಪಾರ್ಕ್ ಬಳಿ ಬಾಂಬ್ ಸ್ಪೋಟಗೊಂಡ ಪರಿಣಾಮ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಇಂದು ಬೆಳಗ್ಗೆ ಮನೆಯ ಬಳಿಯಿದ್ದ ಉದ್ಯಾನವನದ ಬಳಿ ಮಗು ಆಟವಾಡುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬಾಂಬ್ ಸ್ಪೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿದ್ದ ಮಗು ಗಂಭೀರವಾಗಿ ಗಾಯಗೊಂಡಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ತಪಾಸಣೆ ವೇಳೆ ಮತ್ತೆರಡು ನಾಡ ಬಾಂಬ್ ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.
ಗಾಯಗೊಂಡ ಮಗುವನ್ನು ಕೆಜಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.