ನನ್ನ ವಿರುದ್ಧದ ಆರೋಪ ಆಧಾರ ರಹಿತ: ಸುಷ್ಮಾ ಸ್ವರಾಜ್
ಪ್ರತಿಪಕ್ಷಗಳು ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿವೆ ಎಂದು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿದ ಆರೋಪ...
ನವದೆಹಲಿ: ಪ್ರತಿಪಕ್ಷಗಳು ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿವೆ ಎಂದು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ಸೋಮವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ ಸುಷ್ಮಾ ಸ್ವರಾಜ್, ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ ಮತ್ತು ಲಲಿತ್ ಮೋದಿಗೆ ಯಾವುದೇ ಸಹಾಯ ಮಾಡಿಲ್ಲ. ನನ್ನ ವಿರುದ್ಧದ ಆರೋಪಗಳೆಲ್ಲ ಆಧಾರ ರಹಿತ ಎಂದರು.
ಲಲಿತ್ ಮೋದಿ ಪ್ರಯಾಣ ದಾಖಲೆಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ಯಾವತ್ತೂ ಲಂಡನ್ನ ವಲಸೆ ಅಧಿಕಾರಿಗಳೊಂದಿಗೆ ಮಾತನಾಡಿದ್ದ ಎಂದು ಸುಷ್ಮಾ ಸ್ಪಷ್ಟಪಡಿಸಿದರು.
ಈ ಸಂಬಂಧ ನಾನು ಚರ್ಚೆಗೆ ಸಿದ್ಧ. ಇದಕ್ಕಾಗಿ ನಾನು ಪ್ರತಿದಿನ ರಾಜ್ಯಸಭೆಯಲ್ಲಿ ಹಾಜರಾಗಿದ್ದೇನೆ. ಆದರೆ ಚರ್ಚೆಗೆ ನೀವೇ ಅವಕಾಶ ನೀಡುತ್ತಿಲ್ಲ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.