ರಿಜು ಬಫ್ನ 
ದೇಶ

ಈ ದೇಶದಲ್ಲಿ ಹೆಣ್ಣು ಮಕ್ಕಳೇ ಹುಟ್ಟದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ!

ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ರೋಸಿಹೋಗಿರುವ ಮಹಿಳಾ ಐಎಎಸ್ ಅಧಿಕಾರಿ ರಿಜು ಬಫ್ನ ಅವರು ತಮ್ಮ ಫೇಸ್ ಬುಕ್ ನಲ್ಲಿ ಈ ದೇಶದಲ್ಲಿ ಹೆಣ್ಣು...

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ರೋಸಿಹೋಗಿರುವ ಮಹಿಳಾ ಐಎಎಸ್ ಅಧಿಕಾರಿ ರಿಜು ಬಫ್ನ ಅವರು ತಮ್ಮ ಫೇಸ್ ಬುಕ್ ನಲ್ಲಿ ಈ ದೇಶದಲ್ಲಿ ಹೆಣ್ಣು ಮಕ್ಕಳೇ ಹುಟ್ಟದಿರಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ರೋಸಿಹೋಗಿರುವ ಈ ಮಹಿಳೆ ತನ್ನ ಆಕ್ರೋಶವನ್ನ ಈ ರೀತಿ ಹೊರಹಾಕಿದ್ದು, ರಿಜು ಬಫ್ನ (Riju Bafna) ಹೀಗೆ ಫೇಸ್ ಬುಕ್‘ನಲ್ಲಿ ಹಾಕುತ್ತಿದ್ದಂತೆ ಆಕೆಯನ್ನು ಬೆಂಬಲಿಸಿ ಸಾವಿರಾರು ಜನರು ದನಿ ಎತ್ತಿದ್ದಾರೆ.

ಈ ದೇಶದಲ್ಲಿನ ಪ್ರತಿ ಮಹಿಳೆ, ಪ್ರತಿ ಹಂತದಲ್ಲೂ ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗುತ್ತಿದ್ದಾಳೆ. ಆಕೆಗೆ ರಕ್ಷಣೆಯೇ ಇಲ್ಲದಂತಾಗಿದೆ. ಇದಕ್ಕೆಲ್ಲಾ ಕಡಿವಾಣ ಹಾಕಲು ಆಸಾಧ್ಯವಾಗಿರುವುದರಿಂದ ಆ ದೇವರಲ್ಲಿ ಬೇಡಿಕೊಳ್ಳುವುದಿಷ್ಟೆ, ಇನ್ನೆಂದೂ ಈ ನೆಲದಲ್ಲಿ ಹೆಣ್ಣು ಮಕ್ಕಳನ್ನು ಹುಟ್ಟಿಸಬೇಡ’ ಎಂದು ಮಹಿಳಾ ಐಎಎಸ್ ಅಧಿಕಾರಿ ರಿಜು ಬಫ್ನ ತನ್ನ ನೋವಿನ ನುಡಿಗಳನ್ನು ತೆರೆದಿಟ್ಟಿದ್ದಾರೆ.

ಮಧ್ಯಪ್ರದೇಶದ ಮಾನವ ಹಕ್ಕು ಆಯೋಗದ ಸದಸ್ಯನೊಬ್ಬ ನನಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದೆ. ಇದಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಕಳುಹಿಸಿದ್ದ ವ್ಯಕ್ತಿಯ ವಿರುದ್ದ ಕ್ರಮ ಕೈಗೊಂಡ ಆಯೋಗ ಆತನನ್ನು ಅಮಾನತುಗೊಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್‘ ನಲ್ಲಿ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಪ್ರತಿ ವಾದಿ ವಕೀಲರ ನಡವಳಿಕೆಯೂ ನನಗೆ ಅತೀವ  ಬೇಸರ ತರಿಸಿದೆ ಎಂದಿದರುವ ರಿಜು ಬಫ್ನ, ನಮ್ಮ ವ್ಯವಸ್ಥೆಯ ಕುರಿತು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!