ಶಿವಸೇನಾ 
ದೇಶ

ನಮ್ಮದೇ ರಾಷ್ಟ್ರದಲ್ಲಿ ಹಿಂದೂ ಭಯೋತ್ಪಾದನೆಗೆ ಕಾರಣವೇ ಇಲ್ಲ: ಶಿವಸೇನೆ

ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಹಿಂದೂ ಭಯೋತ್ಪಾದನೆಯನ್ನು ಹರಡುವುದಕ್ಕೆ ಯಾವುದೇ ಕಾರಣಗಳಿಲ್ಲ ಎಂದು ಶಿವಸೇನೆ ಹೇಳಿದೆ...

ಮುಂಬೈ: ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಹಿಂದೂ ಭಯೋತ್ಪಾದನೆಯನ್ನು ಹರಡುವುದಕ್ಕೆ ಯಾವುದೇ ಕಾರಣಗಳಿಲ್ಲ ಎಂದು ಶಿವಸೇನೆ ಹೇಳಿದೆ.

ಭಯೋತ್ಪಾದನೆಗೆ ಕೇಸರಿ ಬಣ್ಣವನ್ನು ಹಚ್ಚಿ ರಾಜಕೀಯದಾಟವನ್ನು ಆಡುವುದು ಕುಚೋದ್ಯತನದ ಹಾಗೂ ಸ್ವಾರ್ಥಪರ ರಾಜಕಾರಣವಾಗಿದೆ. ಮಾತ್ರವಲ್ಲದೆ ಪಾಕ್‌ ಪ್ರಾಯೋಜಕತ್ವದ ಭಯೋತ್ಪಾದನೆಗೆ ಹಸಿರು ಪರದೆಯನ್ನು ಹಾಕಿ ಮರೆಮಾಚುವುದು ಸ್ವಂತ ದೇಶಕ್ಕೆ ಬಗೆಯುವ ದ್ರೋಹವಾಗಿದೆ ಎಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ ಕಿಡಿಕಾರಿದೆ.

ಹಿಂದೂ ಭಯೋತ್ಪಾದನೆ ಕುರಿತ ಚರ್ಚೆಯಲ್ಲಿ ಅತ್ಯಂತ ಬಲಯುತವಾಗಿ ತನ್ನ ವಾದವನ್ನು ಮಂಡಿಸಿರುವ ಶಿವಸೇನೆ, ಶೇಕಡಾ ನೂರು ಹಿಂದುಗಳಿರುವ ಭಾರತದಲ್ಲಿ ಭಯೋತ್ಪಾದನೆಯನ್ನು ಹರಡುವ ಯಾವುದೇ ಕಾರಣ ಅಥವಾ ಅನಿವಾರ್ಯತೆ ಹಿಂದೂಗಳಿಗಿಲ್ಲ ಎಂದು ಹೇಳಿತು.

ಕೆಲ ದಿನಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಕಾಂಗ್ರೆಸ್‌ ಪಕ್ಷವು ದೇಶದಲ್ಲಿ ಹಿಂದೂ ಭಯೋತ್ಪಾದನೆ ಎಂಬ ಪದಗಳನ್ನು ಬಳಕೆಗೆ ತರುವ ಮೂಲಕ ಭೀತಿವಾದ ವಿರುದ್ಧದ ದೇಶದ ಹೋರಾಟವನ್ನು ದುರ್ಬಲಗೊಳಿಸಿತು ಎಂದು ಆಪಾದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel