ಜಮ್ಮು: ಜಮ್ಮುವಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗಡಿ ನಿಯಂತ್ರಣ ರೇಖೆಯಾದ ಕೃಷ್ಣ ಘಟಿ ಮತ್ತು ಮಂಡಿ ಸೆಕ್ಟರ್ ಬಳಿ ಪಾಕಿಸ್ತಾನದ ಸೈನಿಕರು ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಚೋದನೆ ಇಲ್ಲದೆಯೇ ನಿನ್ನೆ ರಾತ್ರಿ 9.30ರ ಸುಮಾರಿಗೆ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನದ ಸೈನಿಕರು ರಜೌರಿ ಜಿಲ್ಲೆಯ ಬಾಲಾಕೋಟೆ ಸೆಕ್ಟರ್ ನ ಭಾರತೀಯ ಸೈನಿಕರ ತಾಣಗಳನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸುತ್ತಿದ್ದಾರೆ ಹಿರಿಯ ಅಧಿಕಾರಿ ಹೇಳಿದ್ದಾರೆ.
ಕಳೆದೆರಡು ದಿನಗಳಿಂದಲೂ ಭಾರತೀಯ ಸೈನಕರ ಮೇಲೆ ಪಾಕಿಸ್ತಾನದ ಸೈನಿಕರು ಗುಂಡಿನ ದಾಳಿ ನಡೆಸುತ್ತಿದ್ದು, ಈ ವರೆಗೂ 14ಕ್ಕೆ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದ್ದಾರೆ ಎಂದು ತಿಳಿದುಬಂದಿದೆ.