ದೆಹಲಿ ಮಾಜಿ ಕಾನೂನು ಸಚಿವ ಸೋಮನಾಥ್ ಭಾರತಿ 
ದೇಶ

ಸುಂದರ ಮಹಿಳೆಯರಿಗೆ ಮಾತ್ರ ಭದ್ರತೆ: ಹೇಳಿಕೆ ಸಮರ್ಥಿಸಿಕೊಂಡ ಸೋಮನಾಥ್ ಭಾರತಿ

ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರಕ್ಕೆ ಸಂಪೂರ್ಣ ಸ್ವತಂತ್ರ ನೀಡಿದರೆ ಮಧ್ಯರಾತ್ರಿಯಲ್ಲಿಯೂ ಸುಂದರ ಮಹಿಳೆಯರು ನಿರ್ಭಯದಿಂದ ಓಡಾಡುವಂತೆ ಮಾಡುತ್ತದೆ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದ ಆಪ್ ಮಾಜಿ ಕಾನೂನು...

ನವದೆಹಲಿ: ದೆಹಲಿಯಲ್ಲಿ  ಆಮ್ ಆದ್ಮಿ ಸರ್ಕಾರಕ್ಕೆ ಸಂಪೂರ್ಣ ಸ್ವತಂತ್ರ ನೀಡಿದರೆ ಮಧ್ಯರಾತ್ರಿಯಲ್ಲಿಯೂ ಸುಂದರ ಮಹಿಳೆಯರು ನಿರ್ಭಯದಿಂದ ಓಡಾಡುವಂತೆ ಮಾಡುತ್ತದೆ ಎಂದು ಹೇಳುವ ಮೂಲಕ ಹಲವು ವಿವಾದಕ್ಕೆ ಕಾರಣವಾಗಿದ್ದ ಆಪ್ ನಾಯಕ ಹಾಗೂ ದೆಹಲಿ ಮಾಜಿ ಕಾನೂನು ಸಚಿವ ಸೋಮನಾಥ್ ಭಾರತಿ ಅವರು ಇದೀಗ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಒಂದು ಗಾದೆ ಮಾತನ್ನು ಹೇಳಿದ್ದಷ್ಟೇ ಎಂದು ಮಂಗಳವಾರ ಹೇಳಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ್ದ ಸೋಮನಾಥ್ ಭಾರತಿ, ನಮಗೆ ಸಂಪೂರ್ಣ ಸ್ವತಂತ್ರ ನೀಡಿ, ದೆಹಲಿಗೆ ಸಂಪೂರ್ಣ ಸುರಕ್ಷತೆ ಒದಗಿಸುತ್ತೇನೆ. ದೆಹಲಿಯಲ್ಲಿ ಓಡಾಡುವ ಸುಂದರ ಮಹಿಳೆಯರು ಸಹ ಯಾವುದೇ ಭಯವಿಲ್ಲದೆ ಮಧ್ಯರಾತ್ರಿಯಲ್ಲಿಯೂ ಓಡಾಡಬಹುದು ಎಂದು ಹೇಳಿದ್ದರು.

ಸೋಮನಾಥ್ ಅವರ ಈ ಹೇಳಿಕೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಸೋಮನಾಥ್ ಭಾರತಿ ಅವರು ಮಹಿಳೆಯರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಹೇಳುತ್ತಿವೆ.

ತಮ್ಮ ಹೇಳಿಕೆಗೆ ಹಲವು ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿರುವ ಸೋಮನಾಥ್ ಅವರು, ಸುರಕ್ಷತೆ ಕುರಿತಂತೆ ಗಾದೆ ಮಾತೊಂದನ್ನು ಬಳಸಲಾಯಿತೇ ಹೊರತು ಉದ್ದೇಶ ಪೂರ್ವಕವಾಗಿ ಹೇಳಿದ್ದಲ್ಲ. ದೆಹಲಿಯಲ್ಲಿ ಮಹಿಳೆಯರು ಮಧ್ಯರಾತ್ರಿ ಒಡವೆಗಳನ್ನು ಹಾಕಿ ಬಂದರು ಸುರಕ್ಷಿತರಾಗಿದ್ದೇವೆಂಬ ಭಾವನೆ ಮೂಡಬೇಕೆಂಬ ಉದ್ದೇಶದಿಂದಷ್ಟೇ ಈ ಹೇಳಿಕೆ ನೀಡಿದ್ದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!