ಗುವಾಹತಿ: ಅರುಣಾಚಲ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರಯಾಣಿಸುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಮಂಗಳವಾರ ನಾಪತ್ತೆಯಾಗಿದೆ.
ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಖೊನ್ಸಾ ಜಿಲ್ಲೆಯ ದಿಬ್ರುಗಢದಿಂದ ಟೇಕ್ ಆಫ್ ಆದ ನಂತರ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ಸಂಪರ್ಕ ಕಳೆದುಕೊಂಡಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ.
ಹೆಲಿಕಾಪ್ಟರ್‌ನಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಮಾತ್ರ ಪ್ರಯಾಣಿಸುತ್ತಿದ್ದರು. ಅವರೊಂದಿಗೆ ಪೈಲಟ್ ಹಾಗೂ ಸಹ ಪೈಲಟ್ ಇದ್ದರು ಎಂದು ಅವರು ಹೇಳಿದ್ದಾರೆ.
'ನಾಪತ್ತೆಯಾದ ಹೆಲಿಕಾಪ್ಟರ್‌ನ ಪೈಲಟ್‌ನನ್ನು ಸಂಪರ್ಕಿಸಲು ನಾವು ಸಾಕಷ್ಟು ಯತ್ನಿಸುತ್ತಿದ್ದೇವೆ. ಆದರೆ ಇದುವರೆಗೂ ಸಾಧ್ಯವಾಗಿಲ್ಲ' ಎಂದು ಮೂಲಗಳು ತಿಳಿಸಿವೆ.